ಕರುಗಳನ್ನು ತುಂಬಿಕೊಂಡು ಕೆ.ಆರ್.ಪೇಟೆ ಕಡೆಯಿಂದ ಮೈಸೂರಿಗೆ ತೆರಳುತ್ತಿದ್ದ ಅಪ್ರಾಪ್ತ ಸೇರಿದಂತೆ ಇಬ್ಬರು ಯುವಕರು ಅಜಾಗರು ಕತೆಯಿಂದ ಕಾರನ್ನು ಚಾಲನೆ ಮಾಡಿಕೊಂಡು ಬಂದು ತಾಲೂಕಿನ ಚಿನಕುರಳಿ ಗ್ರಾಮದ ಪಶುವೈದ್ಯ ಆಸ್ಪತ್ರೆ ಮುಂಭಾಗದಲ್ಲಿ ಇದ್ದ ಮೀನಾಕ್ಷಮ್ಮ ಅವರ ಮನೆಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಬಸಕ್ಕೆ ಮನೆಯ ಗೋಡೆ ಸಂಪೂರ್ಣವಾಗಿ ಕುಸಿದು ಮನೆಯ ಬಳಿ ನಿಲ್ಲಿಸಿದ ಬೈಕ್ ಮೇಲೆ ಬಿದ್ದು ಜಕ್ಕಂ ಗೊಂಡಿದೆ. ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ.