ಗ್ರಾಮೀಣ ಭಾಗದ ಅಭಿವೃದ್ಧಿಗೆ ಕ್ರಮ

ತಾಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ 25 ಲಕ್ಷ ರೂ.ವೆಚ್ಚದಲ್ಲಿ ರಾಮಮಂದಿರ ಮೈದಾನದ ಆವರಣದ ಅಭಿವೃದ್ಧಿ, ಚರಂಡಿ ಹಾಗೂ ಕಾಂಕ್ರೀಟ್ ಕಾಮಗಾರಿಗಳಿಗೆ ಬುಧವಾರ ಕ್ಷೇತ್ರದ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಭೂಮಿ ಪೂಜೆ ನೆರವೇರಿಸಿದರು. ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ರಮೇಶ್, ಅಪೆಕ್ಸ್ ಬ್ಯಾಂಕ್ ಮಾಜಿ ನಿರ್ದೇಶಕ ಶಿವಯ್ಯ, ಗ್ರಾಮದ ಯಜಮಾನರಾದ ದಾಸಪ್ಪ, ಗೂಳಯ್ಯ, ಉಮೇಶ್ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಭರವಸೆ
  • ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
ಶ್ರೀರಂಗಪಟ್ಟಣ: ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಭರವಸೆ ನೀಡಿದರು.
ತಾಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಬುಧವಾರ 25 ಲಕ್ಷ ರೂ.ವೆಚ್ಚದಲ್ಲಿ ರಾಮಮಂದಿರ ಮೈದಾನದ ಆವರಣ ಅಭಿವೃದ್ಧಿ, ಚರಂಡಿ ಹಾಗೂ ಕಾಂಕ್ರೀಟ್ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ತಾಲೂಕಿನ ಕೇಂದ್ರ ಸ್ಥಾನವಲ್ಲದೆ ಗ್ರಾಮೀಣ ಭಾಗದ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ. ಒಂದು ವೇಳೆ ನನ್ನ ಗಮನಕ್ಕೆ ಬಾರದೆ ಕಾಮಗಾರಿಗಳಲ್ಲಿ ಸಮಸ್ಯೆಗಳು ಇದ್ದಲ್ಲಿ ತಿಳಿಸಿದರೆ ಅದನ್ನೂ ಸರಿಪಡಿಸಲಾಗುವುದು ಎಂದರು.
ಗ್ರಾಮದಲ್ಲಿ ಆಗಬೇಕಿರುವ ಕೆಲ ಕಾಮಗಾರಿಗಳು, ಸಮಸ್ಯೆಗಳ ನಿವಾರಣೆ ಹಾಗೂ ಕೆಲಸಗಳ ಕುರಿತು ಜನರು ಗಮನಕ್ಕೆ ತಂದಿದ್ದಾರೆ. ಹಂತ ಹಂತವಾಗಿ ಆಗಬೇಕಿರುವ ಕಾರ್ಯಗಳನ್ನು ನಿರ್ವಹಿಸಲಾಗುವುದು. ಪ್ರಸ್ತುತ ಚಾಲನೆ ನೀಡಿರುವ ಕಾಮಗಾರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಂಡು ನಿಗದಿತ ಸಮಯಕ್ಕೆ ಮುಗಿಸಬೇಕು ಎಂದರು.
ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಾ.ಶೋಭಾರಾಣಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ರಮೇಶ್, ಅಪೆಕ್ಸ್ ಬ್ಯಾಂಕ್ ಮಾಜಿ ನಿರ್ದೇಶಕ ಶಿವಯ್ಯ, ಗ್ರಾಮದ ಯಜಮಾನರಾದ ದಾಸಪ್ಪ, ಕುಬೇರಪ್ಪ, ಗೂಳಯ್ಯ, ಮಹದೇವಸ್ವಾಮಿ, ಮುತ್ತುರಾಜು, ಉಮೇಶ್, ಕೆ.ಶೆಟ್ಟಹಳ್ಳಿ ಗ್ರಾಪಂ ಮಾಜಿ ಉಪಾಧ್ಯಕ್ಷ ಕೀರ್ತಿಕುಮಾರ್, ಮಾಜಿ ಸದಸ್ಯ ಅಪ್ಪಾಜಿ, ಮುಖಂಡ ಗಂಗಾಧರ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net