ಭೂಮಾಪನ ಲೋಪ ಸರಿಪಡಿಸಲು ಕ್ರಮ

ಮದ್ದೂರು ತಾಲೂಕಿನ ಈಡಿಗರದೊಡ್ಡಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ದಾಸೇಗೌಡ, ನಾಗೇಗೌಡ, ಶಂಕರಲಿಂಗೇಗೌಡ, ಹರೀಶ್ ಬಾಬು ಸೇರಿದಂತೆ ಹಲವರು ಹಾಜರಿದ್ದರು.
ಮದ್ದೂರು ತಾಲೂಕಿನ ಈಡಿಗರದೊಡ್ಡಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ದಾಸೇಗೌಡ, ನಾಗೇಗೌಡ, ಶಂಕರಲಿಂಗೇಗೌಡ, ಹರೀಶ್ ಬಾಬು ಸೇರಿದಂತೆ ಹಲವರು ಹಾಜರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ಎಂ.ಉದಯ್ ಭರವಸೆ
ಮದ್ದೂರು : ಆತಗೂರು ಹೋಬಳಿ ವ್ಯಾಪ್ತಿಯ ಹಲವು ಗ್ರಾಮಗಳ ಮರು ಭೂ ಮಾಪನದಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸುವ ಬಗ್ಗೆ ಸದನದಲ್ಲಿ ಚರ್ಚಿಸಿದ್ದೇನೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಈಡಿಗರದೊಡ್ಡಿ, ನವಿಲೇ ಹಾಗೂ ಚಾಕನಕೆರೆ ಗ್ರಾಮಗಳಲ್ಲಿ ಸುಮಾರು 2 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ನೆರವೇರಿಸಿ ಮಾತನಾಡಿದರು.
 ನಗರದ ತಾಲೂಕು ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಯ ಬಗ್ಗೆಯ ಸದನದಲ್ಲಿ ಸಚಿವರ ಗಮನಕ್ಕೆ ತಂದಿದ್ದೇನೆ, ಈ ಬಗ್ಗೆ ಸಂಬಂಧಪಟ್ಟ ಸಚಿವರುಗಳಿಂದ ಸಕಾರಾತ್ಮಕ ಉತ್ತರ ಸಿಕ್ಕಿದೆ. ಶೀಘ್ರವಾಗಿ ನಗರದಲ್ಲಿ ಹೈಟೆಕ್ ಕ್ರೀಡಾಂಗಣಕ್ಕೆ ಚಾಲನೆ ಸಿಗಲಿದೆ ಎಂದರು.
ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸೂಕ್ತ ಮುಂಜಾಗ್ರತಾ ಕ್ತಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮುಖಂಡರಾದ ಕೆಸ್ತೂರು ದಾಸೇಗೌಡ, ನಾಗೇಗೌಡ, ಶಂಕರಲಿಂಗೇ ಗೌಡ, ದುಂಡನಹಳ್ಳಿ ಯೋಗೇಶ್, ನವೀನ್ ಕುಮಾರ್, ಕೃಷ್ಣ, ನವೀನ್ ಕುಮಾರ್, ಮನ್‌ಮುಲ್ ನಿರ್ದೇಶಕ ಹರೀಶ್ ಬಾಬು, ಪಿಡಿಒ ಮಧುಸೂದನ್, ನೀರಾವರಿ ಇಲಾಖೆಯ ಅಧಿಕಾರಿ ನಾಗರಾಜು ಸೇರಿದಂತೆ ಹಲವರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net