ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿಕೆ
ಮೇಲುಕೋಟೆ: ನೊಂದ ಮಹಿಳೆಯರ ಸಮಸ್ಯೆ ಬಗೆಹರಿಸಿ ನ್ಯಾಯ ಒದಗಿಸಲು ಶಕ್ತಿ ಮೀರಿ ಶ್ರಮಿಸುತ್ತಿದ್ದು, ಮೇಲುಕೋಟೆಯಲ್ಲಿ ಸ್ವೀಕರಿಸಿದ ಮನವಿಗೂ ತುರ್ತಾಗಿ ನ್ಯಾಯ ಒದಗಿಸಲು ಸೂಚಿಸಲಾಗಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದರು.
ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ರಾಜಗೋಪುರದ ಬಳಿ ಭಾನುವಾರ ಸ್ಥಳೀಯರಿಂದ ಮನವಿ ಸ್ವೀಕರಿಸಿ ಮಾತನಾಡಿದರು.
ಸರ್ಕಾರದಿಂದ ಸಿಗುವ ಸೌಲಭ್ಯಗಳು ಸಾರ್ವಜನಿಕರಿಗೆ ತಲುಪುವಂತೆ ಕ್ರಮ ವಹಿಸಬೇಕು. ನೊಂದವರಿಗೆ ಅಧಿಕಾರಿಗಳು ಸತಾಯಿಸದೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಶೀಘ್ರವಾಗಿ ಪರಿಹರಿಸಬೇಕು ಎಂದರು.
ಇದೇ ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿದ ಡಾ.ನಾಗಲಕ್ಷ್ಮೀ ಚೌಧರಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು. ಬಳಿಕ ರಾತ್ರಿ ವೇಳೆ ವೈದ್ಯರನ್ನು ನಿಯೋಜಿಸಲು ಅಗತ್ಯ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.
ಈ ವೇಳೆ ಡಾ.ವರ್ಷ, ಡಾ.ಅರವಿಂದ, ಗ್ರಾ.ಪಂ ಪಿಡಿಒ ರಾಜೇಶ್ವರ್ ಇತರರು ಇದ್ದರು.