ತಾಲೂಕಿನ ಮಾಗನೂರು ಸಮೀಪದ ಜೆಎಸ್‌ಎಸ್ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ರೋಟರಿ ಸಂಸ್ಥೆಯಿಂದ ಈ ಬಾರಿ ತಾಲೂಕಿನ ರಾಗಿಬೊಮ್ಮನಹಳ್ಳಿ, ನೆಲ್ಲಿಗೆರೆ, ಸರಗೂರು, ದೊಡ್ಡಬೂಹಳ್ಳಿ ಮತ್ತು ಕ್ಯಾತೇಗೌಡನದೊಡ್ಡಿ ಸರ್ಕಾರಿ ಪ್ರೌಢಶಾಲೆಗಳನ್ನು ದತ್ತು ಪಡೆಯಲಾಗಿದೆ. ದತ್ತು ಪಡೆದ ಶಾಲೆಗಳ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಮುಖ್ಯವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಪರಿಕರಗಳ ವಿತರಣೆ, ವಿಶೇಷ ತರಗತಿಗಳು ಮತ್ತು ಮಾದರಿ ಪ್ರಶ್ನೆಪತ್ರಿಕೆಗಳನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.