ದೇಶದ 20 ರಾಜ್ಯಗಳಲ್ಲಿ ಈಗಾಗಲೇ ಈ ಪ್ರಕ್ರಿಯೆ ಮುಕ್ತಾಯವಾಗಿದೆ. ಉಳಿದ 8 ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಶನಿವಾರದಿಂದ ಸಂಘಟನಾ ಸೃಜನ್ ಅಭಿಯಾನ ಆರಂಭವಾಗಿದ್ದು, ಮುಂಬರುವ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಈ ಸಂಘಟನೆ ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿಯಿಂದ ಎಂ.ಲಕ್ಷ್ಮಣ್, ಮಂಜುಳಾ ನಾಯ್ಡು, ಗೋಪಿಕೃಷ್ಣ, ನರೇಂದ್ರ ಅವರನ್ನು ವೀಕ್ಷಕರನ್ನಾಗಿ ನಿಯೋಜಿಸಲಾಗಿದೆ. ತಾಲೂಕು, ಬ್ಲಾಕ್, ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಪಕ್ಷದ ಮುಖಂಡರು, ಜನಪ್ರತಿನಿಧಿಗಳು, ಸಾರ್ವಜನಿಕ ಪ್ರತಿನಿಧಿಗಳು, ಸಂಘ ಸಂಸ್ಥೆ ಮುಖಂಡರಿಂದ ಅಭಿಪ್ರಾಯ ಕಲೆಹಾಕಲಿದ್ದಾರೆ ಎಂದು ಮಾಹಿತಿ ನೀಡಿದರು.