ಕಾಲ ಭೈರವೇಶ್ವರ ದೇಗುಲಕ್ಕೆ ನೆರವು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ಭಾರತಿನಗರ ಯೋಜನಾ ಕಚೇರಿ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಶ್ರೀಕಾಲ ಭೈರವೇಶ್ವರ ದೇವಾಲಯ ನಿರ್ಮಾಣಕ್ಕೆ ಆರ್ಥಿಕ ನೆರವು ಒದಗಿಸಲಾಯಿತು. ಚೇತನಾ, ಮಂಜುನಾಥ್, ಎಂ.ಮುನೇಶ್, ರಂಜಿತ್, ಸವಿತಾ, ಅಶ್ವಿನಿ ಇತರರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ಭಾರತಿನಗರ ಯೋಜನಾ ಕಚೇರಿ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಶ್ರೀಕಾಲ ಭೈರವೇಶ್ವರ ದೇವಾಲಯ ನಿರ್ಮಾಣಕ್ಕೆ ಆರ್ಥಿಕ ನೆರವು ಒದಗಿಸಲಾಯಿತು. ಚೇತನಾ, ಮಂಜುನಾಥ್, ಎಂ.ಮುನೇಶ್, ರಂಜಿತ್, ಸವಿತಾ, ಅಶ್ವಿನಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ 1.5ಲಕ್ಷ ರೂ. ಸಹಾಯ

ಕೆ.ಎಂ.ದೊಡ್ಡಿ:

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಭಾರತಿನಗರ ಯೋಜನಾ ಕಚೇರಿ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಶ್ರೀ ಕಾಲ ಭೈರವೇಶ್ವರ ದೇವಾಲಯ ನಿರ್ಮಾಣಕ್ಕೆ ಆರ್ಥಿಕ ನೆರವು ಒದಗಿಸಲಾಯಿತು.

ಈ ವೇಳೆ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕಿ ಚೇತನಾ ದೇವಾಲಯ ಅಭಿವೃದ್ಧಿ ಸಮಿತಿಯವರಿಗೆ ಡಿಡಿ ಹಸ್ತಾಂತರಿಸಿ ಬಳಿಕ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು 1.5 ಲಕ್ಷ ರೂ. ನೆರವು ಮಂಜೂರು ಮಾಡಿದ್ದಾರೆ ಎಂದರು.
ಗ್ರಾಮಗಳು ಅಭಿವೃದ್ಧಿ ಆಗಬೇಕು ಅಂದರೆ ಗ್ರಾಮದ ಜನತೆ ಒಗ್ಗಟ್ಟಿನಿಂದ ಇರಬೇಕು. ಗ್ರಾಮಸ್ಥರು ಒಟ್ಟಾಗಿ ಸೇರಿ ಧಾರ್ಮಿಕ ಶ್ರದ್ಧಾ ಕೇಂದ್ರ ಅಭಿವೃದ್ಧಿ ಮಾಡುತ್ತಿದ್ದು, ಎಲ್ಲೂರು ಸಾಂಗವಾಗಿ ನೆರವೇರಲಿ ಎಂದು ಆಶಿಸಿದರು.
ಬಿದರಹಳ್ಳಿ ಸೇರಿದಂತೆ ಕೆ.ಶೆಟ್ಟಹಳ್ಳಿ, ಕಾಡುಕೊತ್ತನಹಳ್ಳಿ ಮತ್ತು ಕರಡಕೆರೆ ಗ್ರಾಮಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ದೇವಾಲಯ ಮತ್ತು ಸಮುದಾಯಭವನ ಅಭಿವೃದ್ಧಿಗೆ 22 ಲಕ್ಷ ರೂ. ಆರ್ಥಿಕ ನೆರವು ಕಲ್ಪಿಸಲಾಗಿದೆ ಎಂದರು.
ಶ್ರೀೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಗ್ರಾಮೀಣ ಜನರಿಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.
ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜು ಮಾತನಾಡಿ, ಧರ್ಮಸ್ಥಳ ಕ್ಷೇತ್ರದಿಂದ ಹತ್ತಾರು ಸಮಾಜಮುಖಿ ಕಾರ್ಯಕ್ರಮ ರೂಪಿಸಿ ಜಾರಿಗೊಳಿಸಿದ್ದು, ಇದನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಮಂಜುನಾಥ್, ವಲಯದ ಮೇಲ್ವಿಚಾರಕ ಎಂ.ಮುನೇಶ್, ನಗದು ಮೇಲ್ವಿಚಾರಕ ರಂಜಿತ್, ಸೇವಾಪ್ರತಿನಿಧಿ ಸವಿತಾ, ಅಶ್ವಿನಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net