ಅಕ್ಕರೆಯ ಅಂಗಳ ಬೇಸಿಗೆ ಶಿಬಿರ ಸಮಾರೋಪ

ಹಲಗೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಆಯೋಜಿಸಿದ್ದ ಬೇಸಿಗೆ ಶಿಬಿರದ ಸಮಾರೋಪದಲ್ಲಿ ಮಕ್ಕಳಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು.
ಹಲಗೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಆಯೋಜಿಸಿದ್ದ ಬೇಸಿಗೆ ಶಿಬಿರದ ಸಮಾರೋಪದಲ್ಲಿ ಮಕ್ಕಳಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು.
Published on
ಹಲಗೂರು: ಮಂಡ್ಯ ಜಿಪಂ ಮಾರ್ಗದರ್ಶನದಲ್ಲಿ ಅಕ್ಕರೆಯ ಅಂಗಳ ಬೇಸಿಗೆ ಶಿಬಿರ ಯಶಸ್ವಿಯಾಗಿ ನಡೆದಿದ್ದು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕೌಶಲಗಳನ್ನು ಕಲಿಯಲು ಸಹಕಾರಿಯಾಗಿದೆ ಎಂದು ಗ್ರಾಮ ಪಂಚಾಯತಿ ಆಡಳಿತಾಧಿಕಾರಿ ವೈ.ಡಿ.ಅನಿಲ್ ಕುಮಾರ್ ಹೇಳಿದರು.
ಹಲಗೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಬುಧವಾರ ಹಲಗೂರು ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಆಯೋಜಿಸಿದ್ದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೆ.ಚೆಂದಿಲ್ ಮಾತನಾಡಿ, ಬೇಸಿಗೆ ರಜೆಯ ಅವಧಿಯಲ್ಲಿ ಮಕ್ಕಳಲ್ಲಿರುವ ಕ್ರಿಯಾಶೀಲತೆಯನ್ನು ಹೆಚ್ಚಿಸಲು ಶಿಬಿರದಲ್ಲಿ ಪ್ರತಿದಿನ ವಿವಿಧ ಬಗೆಯ ಆಟಗಳು ಸೇರಿದಂತೆ ಕೌಶಲಾಧಾರಿತ ಚಟುವಟಿಕೆ ಕೈಗೊಳ್ಳಲಾಗಿತ್ತು ಎಂದರು.
ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ್ದ ಸುಮಾರು 45ಕ್ಕೂ ಹೆಚ್ಚು ಮಕ್ಕಳಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಎನ್.ಆನಂದ್, ಅರಿವು ಕೇಂದ್ರದ ಮೇಲ್ವಿಚಾರಕ ಶಿವನಂಜು, ಸಂಜೀವಿನಿ ಒಕ್ಕೂಟದ ಸದಸ್ಯೆ ಗಂಗಮ್ಮ ಇತರರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net