ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನಾಳೆ

ಪಾಂಡವಪುರದಲ್ಲಿ ಆಯೋಜಿಸಿದ್ದ  ಸುದ್ದಿಗೋಷ್ಠಿಯಲ್ಲಿ ಮುಲ್ ನಿರ್ದೇಶಕ, ಚಿನಕುರಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಿ.ಶಿವಕುಮಾರ್ ಮಾತನಾಡಿದರು.
ಪಾಂಡವಪುರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮುಲ್ ನಿರ್ದೇಶಕ, ಚಿನಕುರಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಿ.ಶಿವಕುಮಾರ್ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಮನ್ ಮುಲ್ ನಿರ್ದೇಶಕ, ಚಿನಕುರಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಿ.ಶಿವಕುಮಾರ್ ಮಾಹಿತಿ
ಪಾಂಡವಪುರ : ತಾಲೂಕಿನ ಚಿನಕುರಳಿ ಗ್ರಾಮದ ಜಯಮ್ಮ ಕಾಳೇಗೌಡ ಕಲ್ಯಾಣ ಮಂಟಪದಲ್ಲಿ ನ.19 ರಂದು ಬೆಳಗ್ಗೆ 11ಕ್ಕೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮನ್ ಮುಲ್ ನಿರ್ದೇಶಕ, ಚಿನಕುರಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಿ.ಶಿವಕುಮಾರ್ ತಿಳಿಸಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಮಂಡ್ಯ ಜಿಲ್ಲಾ ಸಹಕಾರ ಒಕ್ಕೂಟ ಮಂಡ್ಯ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಂಡ್ಯ, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಮಂಡ್ಯ ಹಾಗೂ ಸಹಕಾರ ಇಲಾಖೆ ಮಂಡ್ಯ, ಚಿನಕುರಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಪಾಂಡವಪುರ ತಾಲೂಕಿನ ಎಲ್ಲಾ ಸಹಕಾರ ಸಂಘಗಳ ಆಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಶಾಸಕ ದರ್ಶನ್ ಪುಟ್ಟಣ್ಣಯ್ಯ ಉದ್ಘಾಟಿಸುವರು. ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಹಾಗೂ ಕೆಎಂಎಫ್ ನಿರ್ದೇಶಕ ಎನ್.ಅಪ್ಪಾಜಿಗೌಡ ಉಪಸ್ಥಿತಿ ಇರಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮನ್ ಮುಲ್ ನಿರ್ದೇಶಕ, ಚಿನಕುರಳಿ ಡೇರಿ ಅಧ್ಯಕ್ಷ ಸಿ.ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಚಿನಕುರಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಿ.ಎಸ್.ಗೋಪಾಲಗೌಡ ಸಹಕಾರ ಧ್ವಜಾರೋಹಣ ನೆರವೇರಿಸುವರು. ಬೈರಾಪುರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜಿ.ಎನ್.ಕೆಂಪೇಗೌಡ ಉಪನ್ಯಾಸ ನೀಡಲಿದ್ದಾರೆ ಎಂದರು.
ವಿಶೇಷ ಆಹ್ವಾನಿತರಾಗಿ ಮಂಡ್ಯ ಜಿಲ್ಲಾ ಸಹಕಾರ ಒಕ್ಕೂಟದ ವಿಶೇಷಾಧಿಕಾರಿ ಕೆ.ಅನಿತಾ, ಮನ್ ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿರ್ದೇಶಕ ಎಸ್.ಎಲ್.ಮೋಹನ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಚ್.ಸಿ.ಪುಟ್ಟಸ್ವಾಮಿಗೌಡ, ಎ.ವಿಜೇಂದ್ರಮೂರ್ತಿ, ಹೇಮಾವತಿ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳ ಅಧ್ಯಕ್ಷ ಆರ್.ಎ.ನಾಗಣ್ಣ, ಕೆಆರ್‌ಎಸ್ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳ ಅಧ್ಯಕ್ಷ ಎಚ್.ಕೆ.ಕೃಷ್ಣ, ಟಿಎಪಿಸಿಎಂಎಸ್ ಅಧ್ಯಕ್ಷ ಎಚ್.ಗಿರೀಶ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಎಚ್.ಬಿ.ಚಲುವೇಗೌಡ (ಬಕೋಡಿ) ಸೇರಿದಂತೆ ಹಲವರು ಭಾಗವಹಿಸುವರು ಎಂದರು.
ಗೋಷ್ಠಿಯಲ್ಲಿ ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಸಿ.ಪುಟ್ಟಸ್ವಾಮಿಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಎಚ್.ಗಿರೀಶ್, ನಿರ್ದೇಶಕ ವಿ.ಎಸ್.ನಿಂಗೇಗೌಡ, ಮಾಜಿ ಅಧ್ಯಕ್ಷ ರಾಮಕೃಷ್ಣೇಗೌಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಎಚ್.ಬಿ.ಚಲುವೇಗೌಡ (ಬಕೋಡಿ), ಸಹಕಾರ ಇಲಾಖೆಯ ನಿರ್ಮಲಾ, ಮನ್ ಮುಲ್ ಉಪ ಕಚೇರಿಯ ಉಪ ವ್ಯವಸ್ಥಾಪಕ ಪ್ರಸಾದ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net