ಕೊಟ್ಟ ಮಾತಿನಂತೆ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ

ಮದ್ದೂರು ತಾಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಚಲುವರಾಜು, ಪಿ.ಸಂದರ್ಶ, ಹರೀಶ್‌ಬಾಬು, ಕೆ.ಆರ್.ಮಹೇಶ್, ಗೋಪಿ. ಸುಧಾಕರ್ ಇದ್ದರು.
ಮದ್ದೂರು ತಾಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಚಲುವರಾಜು, ಪಿ.ಸಂದರ್ಶ, ಹರೀಶ್‌ಬಾಬು, ಕೆ.ಆರ್.ಮಹೇಶ್, ಗೋಪಿ. ಸುಧಾಕರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ಎಂ.ಉದಯ್ ಹೇಳಿಕೆ
  • ರಸ್ತೆ ಕಾಮಗಾರಿಗೆ ಭೂಮಿಪೂಜೆ
ಮದ್ದೂರು: ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ಪ್ರತಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಅನುದಾನ ತಂದು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.
ತಾಲೂಕಿನ ಕೊತ್ತನಹಳ್ಳಿ, ಹೊಸಕೆರೆ, ನಿಲುವಾಗಿಲು, ಸೀನಪ್ಪನದೊಡ್ಡಿ ಹಾಗೂ ಎನ್.ಕೋಡಿಹಳ್ಳಿ ಗ್ರಾಮಗಳಲ್ಲಿ ಶನಿವಾರ 2.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ಹಗಲು-ರಾತ್ರಿ ಎನ್ನದೇ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗಿದ್ದೇನೆ. ಯಾರೂ ಕೂಡ ನನಗೆ ಅರ್ಜಿ ಕೊಟ್ಟು ನಮ್ಮ ಗ್ರಾಮಗಳ ಅಭಿವೃದ್ಧಿ ಮಾಡಿ ಎಂದು ಕೇಳಿಲ್ಲ. ಆದರೆ ಕ್ಷೇತ್ರದ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಒತ್ತಡ ಹೇರಿ 1500 ಕೋಟಿ ರೂ.ಗೂ ಹೆಚ್ಚು ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇನೆ ಎಂದರು.
ರಾಜಕಾರಣ ಶಾಶ್ವತವಲ್ಲ, ಅಭಿವೃದ್ಧಿ ಕಾರ್ಯಗಳೇ ಶಾಶ್ವತ. ಚುನಾವಣಾ ಸಂದರ್ಭದಲ್ಲಿ ಮಾತ್ರ ರಾಜಕಾರಣ ಮಾಡೋಣ ಉಳಿದ ವೇಳೆ ಅಭಿವೃದ್ಧಿ ಕೆಲಸಗಳತ್ತ ಗಮನಹರಿಸೋಣ. ಹಾಗಾಗಿ ಕ್ಷೇತ್ರದ ವಿವಿಧ ಗ್ರಾಮಗಳ ಕುಂದುಕೊರತೆಗಳನ್ನು ಪಟ್ಟಿ ಮಾಡಿದ್ದು, ಹಂತ ಹಂತವಾಗಿ ಆದ್ಯತೆ ಮೇರೆಗೆ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ತೈಲೂರು ಚಲುವರಾಜು, ನಿರ್ದೇಶಕ ಪಿ.ಸಂದರ್ಶ್, ಮನ್ ಮುಲ್ ನಿರ್ದೇಶಕ ಹರೀಶ್ ಬಾಬು, ಕಾಂಗ್ರೆಸ್ ಮುಖಂಡರಾದ ಗೋಪಿ, ಸುಧಾಕರ್, ಕೆ.ಆರ್.ಮಹೇಶ್, ಅಮರ್, ಇಂಜಿನಿಯರ್ ರಮೇಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net