ಮೆಣಸಗೆರೆ ಡೇರಿಗೆ ಆಲೂರಯ್ಯ ಅಧ್ಯಕ್ಷ

ಮೆಣಸಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾದ ಆಲೂರಯ್ಯ ಅವರನ್ನು ಸಂಘದ ನಿರ್ದೇಶಕರು ಅಭಿನಂದಿಸಿದರು. ನಿರ್ದೇಶಕರಾದ ಪ್ರಶಾಂತ್, ಬಸವರಾಜು, ಗೀತಾ, ಶ್ರೀನಿವಾಸ ಮೂರ್ತಿ ಇತರರು ಇದ್ದರು.
ಮೆಣಸಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾದ ಆಲೂರಯ್ಯ ಅವರನ್ನು ಸಂಘದ ನಿರ್ದೇಶಕರು ಅಭಿನಂದಿಸಿದರು. ನಿರ್ದೇಶಕರಾದ ಪ್ರಶಾಂತ್, ಬಸವರಾಜು, ಗೀತಾ, ಶ್ರೀನಿವಾಸ ಮೂರ್ತಿ ಇತರರು ಇದ್ದರು.
Published on
ಕೆ.ಎಂ.ದೊಡ್ಡಿ: ಮೆಣಸಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಆಲೂರಯ್ಯ ಅವಿರೋಧವಾಗಿ ಆಯ್ಕೆಯಾಗಿದರು.
ಮಧಸೂದನ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಆಲೂರಯ್ಯ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣದ ಸಂಘದ ಕಾರ್ಯದರ್ಶಿ ಎಂ.ಟಿ. ಸುರೇಶ್ ರವರು ಅವಿರೋಧ ಆಯ್ಕೆಯನ್ನು ಘೋಷಿಸಿದರು.

ನೂತನ ಅಧ್ಯಕ್ಷ ಆಲೂರಯ್ಯ ಮಾತನಾಡಿ, ನನ್ನ ಮೇಲೆ ನಂಬಿಕೆ ಇಟ್ಟು ಸಂಘದ ನಿರ್ದೇಶಕರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಅವರಿಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸುತ್ತೇನೆ. ಸಂಘದ ನಿರ್ದೇಶಕರ ಜತೆಗೂಡಿ ಸಂಘದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿ ಸಂಘವನ್ನು ಅಭಿವೃದ್ಧಿ ಪಥದಲ್ಲಿ ನಡೆಸುತ್ತೇನೆ ಎಂದು ತಿಳಿಸಿದರು.
ಸಂಘದ ನಿರ್ದೇಶಕರಾದ ಪ್ರಶಾಂತ್, ಬಸವರಾಜು, ಗೀತಾ, ಶ್ರೀನಿವಾಸ ಮೂರ್ತಿ, ಜಗದೀಶ್, ಸುರೇಶ್, ಗ್ರಾ.ಪಂ. ಅಧ್ಯಕ್ಷ ಮಹದೇವು, ಮಾಜಿ ಸದಸ್ಯ ಶಿವಲಿಂಗಯ್ಯ, ಮುಖಂಡರಾದ ನಾಡಗೌಡಸೋಮು, ಸಣ್ಣೇಗೌಡ, ರಾಜಣ್ಣ, ದೇವೇಗೌಡ, ಮಧು ,ಪ್ರದೀಪ, ಪ್ರಮೋದ್, ಜೈರಾಮ್, ಉಮೇಶ್, ಅರವಿಂದೇಗೌಡ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net