ಬಟ್ಟೆ ಬ್ಯಾಗ್ ವಿತರಿಸಿ ಸಾರ್ವಜನಿಕರಲ್ಲಿ ಜಾಗೃತಿ: ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಮುಕ್ತ ದಿನದ ಅಂಗವಾಗಿ ಆಯೋಜನೆ

ಮಂಡ್ಯ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಬಟ್ಟೆ ಬ್ಯಾಗ್ ವಿತರಿಸಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಮಂಡ್ಯ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಬಟ್ಟೆ ಬ್ಯಾಗ್ ವಿತರಿಸಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
Published on
ಮಂಡ್ಯ: ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಮುಕ್ತ ದಿನದ ಅಂಗವಾಗಿ ರೋಟರಿ ಮಂಡ್ಯ, ಇನ್ನರ್‌ವ್ಹೀಲ್, ಡಿವೈನ್ ಫ್ರೆಂಡ್ಸ್ ಗ್ರೂಪ್, ಬಿಎನ್‌ಐ ಹಾಗೂ ನಗರಸಭೆ ಸಹಯೋಗದಲ್ಲಿ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾರ್ವಜನಿಕರಿಗೆ 450ಕ್ಕೂ ಹೆಚ್ಚು ಬಟ್ಟೆ ಬ್ಯಾಗ್‌ಗಳನ್ನು ಉಚಿತವಾಗಿ ವಿತರಿಸಲಾಯಿತು. ಈ ಮೂಲಕ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಅಪಾರ ಹಾನಿಯಾಗುವುದರ ಜತೆಗೆ ಮಾನವನ ಆರೋಗ್ಯದ ಮೇಲೆಯೂ ಗಂಭೀರ ಪರಿಣಾಮ ಉಂಟಾಗುತ್ತಿವೆ. ಪ್ಲಾಸ್ಟಿಕ್ ತ್ಯಾಜ್ಯದಿಂದ ಮಣ್ಣು, ನೀರು ಹಾಗೂ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಜಲಚರ ಹಾಗೂ ಪ್ರಾಣಿಗಳ ಜೀವಕ್ಕೂ ಅಪಾಯ ಎದುರಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಮಾರುಕಟ್ಟೆಗೆ ತೆರಳುವಾಗ ತಮ್ಮೊಂದಿಗೆ ಬಟ್ಟೆ ಬ್ಯಾಗ್ ಕೊಂಡೊಯ್ಯುವ ಅಭ್ಯಾಸ ರೂಢಿಸಿಕೊಳ್ಳಬೇಕು. ಏಕಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಿ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅರಿವು ಮೂಡಿಸಿದರು.
ರೋಟರಿ ಅಧ್ಯಕ್ಷ ರಾಜಶೇಖರ್, ಕಾರ್ಯದರ್ಶಿ ಲಕ್ಷ್ಮೀನಾರಾಯಣ್, ಉಪಾಧ್ಯಕ್ಷ ಮೋಹನ್, ಪದಾಧಿಕಾರಿಗಳಾದ ಬಿ.ಎಸ್.ಅನುಪಮಾ, ಮಂಜುನಾಥ್, ಲೋಕೇಶ್, ಪ್ರಶಾಂತ್, ಇನ್ನರ್‌ವ್ಹೀಲ್ ಸಂಸ್ಥೆಯ ಅಧ್ಯಕ್ಷೆ ಅನು, ಕಾರ್ಯದರ್ಶಿ ವಿದ್ಯಾ ನಾರಾಯಣ್, ಸದಸ್ಯರಾದ ಶಾಂತಾ, ಮಂಜುನಾಥ್, ಸುನೀತಾ, ಬಿಎನ್‌ಐ ಸಂಸ್ಥೆಯ ಅಧ್ಯಕ್ಷ ಕೀರ್ತನ್, ಡಿವೈನ್ ಫ್ರೆಂಡ್ಸ್ ತಂಡದ ಮಲ್ಲೇಶ್, ನಗರಸಭೆ ಪರಿಸರ ಇಂಜಿನಿಯರ್ ರುದ್ರೇಗೌಡ, ಆರೋಗ್ಯ ನಿರೀಕ್ಷಕ ಅಶ್ವಥ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net