ಡ್ರಗ್ಸ್ ಮುಕ್ತ ಜಿಲ್ಲೆಯಾಗಿಸಲು ಶ್ರಮಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.
ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ನಗರದಲ್ಲಿ ಅಧಿಕಾರಿಗಳೊಂದಿಗೆ ಸಭೆ
ಮಂಡ್ಯ: ಮಾದಕ ವಸ್ತುಗಳ ಸೇವನೆಗೊಮ್ಮೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟ. ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಉತ್ತಮ ಆರೋಗ್ಯವನ್ನು ಪಡೆಯುವ ಹಾಗೂ ಡ್ರಗ್ಸ್ ಮುಕ್ತ ಜಿಲ್ಲೆಯಾಗಿ ಮಾಡುವ ನಿಟ್ಟಿನಲ್ಲಿ ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪಪರಿಣಾಮ ಕುರಿತು ಶಾಲಾ ಮಕ್ಕಳಿಂದ ಪಾಲಕರಿಗೆ ಪತ್ರ ಅಭಿಯಾನ ಮೂಲಕ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.
ಶ್ರೀರಂಗಪಟ್ಟಣದಲ್ಲಿ ಅಪ್ರಾಪ್ತ ವಯಸ್ಸಿನ ಯುವಕರು ಮಾದಕ ವಸ್ತು ಸೇವನೆ ಮಾಡುತ್ತಿರುವ ಬಗ್ಗೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ 2 ವರ್ಷಗಳ ಮಾದಕ ವಸ್ತು ಸಂಬಂಧಪಟ್ಟ ಪ್ರಕರಣಗಳ ವಿವರಗಳನ್ನು ನೀಡಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಅರಣ್ಯ ಪ್ರದೇಶಗಳು ಹಾಗೂ ಕೃಷಿ ಭೂಮಿಗಳಲ್ಲಿ ಗಾಂಜಾ ಬೀಜಗಳನ್ನು ಬೆಳೆಸುವ ಮಾಹಿತಿ ಕಂಡುಬಂದಿದೆ. ಅಧಿಕಾರಿಗಳು ಅರಣ್ಯ ಪ್ರದೇಶಳನ್ನು ಭೇಟಿ ನೀಡಿ ಪರಿಶೀಲನೆ ಮಾಡಬೇಕು. ಹಾಗೂ ಗಾಂಜಾ ಬೆಳೆಯುವ ಪ್ರದೇಶವನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮತ್ತು ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ ಮಾತನಾಡಿ, ಮಾದಕ ವಸ್ತು ಸೇವನೆ ಮಾಡುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಡಿಡಿಪಿಐ ಲೋಕೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net