ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮದ್ದೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ, ರಾಜ್ಯ ಪರಿಷತ್ ಸ್ಥಾನಕ್ಕೆ ಕೆ.ಮಂಜು ಹಾಗೂ ಖಜಾಂಚಿ ಸ್ಥಾನಕ್ಕೆ ಆಯ್ಕೆಯಾದ ಎಚ್.ಎಂ.ಮಣಿ ಅವರನ್ನು ಶಾಸಕ ಕೆ.ಎಂ.ಉದಯ್ ಅಭಿನಂದಿಸಿದರು. ಶಿವನಂಜೇಗೌಡ, ಟಿ.ಬಿ.ಸತೀಶ್‌ಕುಮಾರ್, ಮರೀಗೌಡ, ಯೋಗಾನಂದ, ನಾಗೇಂದ್ರ ಇದ್ದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮದ್ದೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ, ರಾಜ್ಯ ಪರಿಷತ್ ಸ್ಥಾನಕ್ಕೆ ಕೆ.ಮಂಜು ಹಾಗೂ ಖಜಾಂಚಿ ಸ್ಥಾನಕ್ಕೆ ಆಯ್ಕೆಯಾದ ಎಚ್.ಎಂ.ಮಣಿ ಅವರನ್ನು ಶಾಸಕ ಕೆ.ಎಂ.ಉದಯ್ ಅಭಿನಂದಿಸಿದರು. ಶಿವನಂಜೇಗೌಡ, ಟಿ.ಬಿ.ಸತೀಶ್‌ಕುಮಾರ್, ಮರೀಗೌಡ, ಯೋಗಾನಂದ, ನಾಗೇಂದ್ರ ಇದ್ದರು.
Published on
ಮದ್ದೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮದ್ದೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಸಂಘದ ಕಚೇರಿಯಲ್ಲಿ 2024-2029ನೇ ಸಾಲಿನ ಉಳಿದ ಅವಧಿಗೆ ಭಾನುವಾರ ಮೂರು ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಚುನಾವಣಾ ಪ್ರಕ್ರಿಯೆ ವೇಳೆಗೆ ಅಧ್ಯಕ್ಷ ಸ್ಥಾನಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಬ್ಯಾಡರಹಳ್ಳಿ ಅಂಕೇಗೌಡ, ರಾಜ್ಯ ಪರಿಷತ್ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ಕೆ.ಮಂಜು ಹಾಗೂ ಖಜಾಂಚಿ ಸ್ಥಾನಕ್ಕೆ ಆರೋಗ್ಯ ಇಲಾಖೆಯ ಎಚ್.ಎಂ.ಮಣಿ ಅವರು ಮಾತ್ರ ಮೂರು ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದರು. ಆದರೆ, ಈ ವೇಳೆ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಶಂಭುಗೌಡ ಘೋಷಣೆ ಮಾಡಿದರು.
ಅಂಕೇಗೌಡ ಮಾತನಾಡಿ, ತಾಲೂಕು ವ್ಯಾಪ್ತಿಯಲ್ಲಿ ಸರ್ಕಾರಿ ನೌಕರರ ಭವನವನ್ನು ವಿಸ್ತರಣೆ ಮಾಡಬೇಕೆಂಬ ಕನಸಿದ್ದು, ಶಾಸಕರು ಹಾಗೂ ಸಂಬಂಧಪಟ್ಟವರ ಜತೆ ಚರ್ಚೆ ನಡೆಸಿ ಮೊದಲ ಆದ್ಯತೆ ನೀಡುತ್ತೇನೆ. ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಮರು ಜಾರಿಗಾಗಿ ಹೋರಾಟದ ಹಾಗೂ ಸರ್ಕಾರಿ ನೌಕರರ ಸಮಸ್ಯೆಗಳನ್ನು ಬಗೆಹರಿಸಲು, ತಾಲೂಕು ಸಂಘವನ್ನು ರಾಜ್ಯದಲ್ಲಿಯೇ ಮಾದರಿ ಸಂಘವನ್ನಾಗಿಸಲು ಶ್ರಮಿಸುತ್ತೇನೆ ಎಂದರು.
ಚುನಾವಣಾಧಿಕಾರಿಯಾಗಿ ರಾಜ್ಯ ಹಿರಿಯ ಉಪಾಧ್ಯಕ್ಷ ಎಸ್.ಶಂಭುಗೌಡ ಚುನಾವಣಾ ಪ್ರಕ್ರಿಯೆ ನಡೆಸಿದರು.ನೂತನ ಅಧ್ಯಕ್ಷ ಬ್ಯಾಡರಹಳ್ಳಿ ಅಂಕೇಗೌಡ ಅವರನ್ನು ಪದಾಧಿಕಾರಿಗಳು ಮತ್ತು ನಿರ್ದೇಶಕರು ಅಭಿನಂದಿಸಿದರು.
ಗೌರವಾಧ್ಯಕ್ಷ ಶಿವನಂಜೇಗೌಡ, ಕಾರ್ಯದರ್ಶಿ ಟಿ.ಬಿ.ಸತೀಶ್ ಕುಮಾರ್ ನಿರ್ದೇಶಕರಾದ ಮರೀಗೌಡ, ಯೋಗಾನಂದ, ನಾಗೇಂದ್ರ ಕುಮಾರ್, ಶ್ರೀನಿವಾಸ್, ಸಂತೋಷ್, ಕೆ.ಟಿ.ಮಂಜುನಾಥ್, ಎಸ್.ವಿ.ರಾಮಲಿಂಗಯ್ಯ, ಮೋಹನ್, ಶರತ್, ಸಂದೀಪ್ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net