ರಾತ್ರೋರಾತ್ರಿ ಬಾಳೆಗೊನೆಗಳು ಮಾಯ

ಮಳವಳ್ಳಿ ತಾಲೂಕಿನ ಬಿ.ಜಿ.ಪುರ ಗ್ರಾಮದ ರೈತ ಶಿವಾನಂದ ಅವರ ಜಮೀನಿನಲ್ಲಿ ಕಟಾವಿಗೆ ಬಂದಿದ್ದ ಬಾಳೆ ಗೊನೆಗಳನ್ನು ಕಳ್ಳರು ಕಡಿದಿರುವುದು.
ಮಳವಳ್ಳಿ ತಾಲೂಕಿನ ಬಿ.ಜಿ.ಪುರ ಗ್ರಾಮದ ರೈತ ಶಿವಾನಂದ ಅವರ ಜಮೀನಿನಲ್ಲಿ ಕಟಾವಿಗೆ ಬಂದಿದ್ದ ಬಾಳೆ ಗೊನೆಗಳನ್ನು ಕಳ್ಳರು ಕಡಿದಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • ಕಡಿದು ಹೊತ್ತೊಯ್ದ ಕಳ್ಳರು

ಮಳವಳ್ಳಿ:

ತಾಲೂಕಿನ ಬಿ.ಜಿ.ಪುರ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಗೊನೆಗಳನ್ನು ಶನಿವಾರ ರಾತ್ರಿ ಕಳ್ಳರು ಕಡಿದು ಹೊತ್ತೊಯ್ದಿದ್ದಾರೆ.

ಗ್ರಾಮದ ರೈತ ಶಿವಾನಂದ ಅವರ ಬಾಳೆ ತೋಟದಲ್ಲಿ ಶನಿವಾರ ರಾತ್ರಿ ಈ ಕೃತ್ಯ ನಡೆದಿದೆ. ಕಟಾವಿಗೆ ಬಂದಿದ್ದ ಸುಮಾರು 200ಕ್ಕೂ ಹೆಚ್ಚು ಬಾಳೆ ಗೊನೆಗಳನ್ನು ಕದ್ದಿದ್ದಾರೆ.
ಎರಡು ಎಕರೆ ಪ್ರದೇಶದಲ್ಲಿ ರೈತ ಶಿವಾನಂದ ಬಾಳೆ ಬೆಳೆದಿದ್ದರು. ಇದರಿಂದ ಲಕ್ಷಾಂತರ ರೂ. ನಷ್ಟ ವಾಗಿದೆ.
ಈ ಬಗ್ಗೆ ಬೆಳಕವಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಕೆಲವು ತಿಂಗಳಿಂದ ತಾಲೂಕಿನಲ್ಲಿ ಅಡಿಕೆ, ತೆಂಗು ಮತ್ತು ಬಾಳೆ ಫಸಲು ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾತ್ರಿ ವೇಳೆ ಗಸ್ತು ಹೆಚ್ಚಿಸುವಂತೆ ರೈತರು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net