ಪಟ್ಟಣದ ಹಳೇ ಬಸ್ ನಿಲ್ದಾಣ, ನಾಗಮಂಗಲ ರಸ್ತೆ ಹಾಗೂ ಸಿದ್ದಿಮಂಟಪದಲ್ಲಿರುವ ಸಗಟು ಮತ್ತು ಚಿಲ್ಲರೆ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಂಗಡಿಯಲ್ಲಿದ್ದ ನಿಷೇಧಿತ ಪ್ಲಾಸ್ಟಿಕ್ ಕವರ್‌ಗಳು, ಪ್ಲಾಸ್ಟಿಕ್ ಲೋಟ, ಚಮಚ ಸೇರಿದಂತೆ ಮಣ್ಣಿನಲ್ಲಿ ಕೊಳೆಯದ ಮತ್ತು ಪರಿಸರಕ್ಕೆ ಹಾನಿ ಮಾಡುವ ವಸ್ತುಗಳನ್ನು ವಶಕ್ಕೆ ಪಡೆದು ಅಂಗಡಿಗಳ ಮಾಲೀಕರಿಗೆ ದಂಡ ವಿಧಿಸಿದರು.