ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ

ಮದ್ದೂರು ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಚಲುವರಾಜು, ತಿಪ್ಪೂರು ರಾಜೇಶ್, ಮುತ್ತುರಾಜು, ಮಹೇಂದ್ರ ಇದ್ದರು.
ಮದ್ದೂರು ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಚಲುವರಾಜು, ತಿಪ್ಪೂರು ರಾಜೇಶ್, ಮುತ್ತುರಾಜು, ಮಹೇಂದ್ರ ಇದ್ದರು.
Published on
ಮದ್ದೂರು: ಬೇಸಿಗೆ ಆರಂಭವಾಗಿರುವುದರಿಂದ ತಾಲೂಕಿನ ಗ್ರಾಮಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ರುದ್ರಾಕ್ಷಿಪುರ, ತಿಪ್ಪೂರು, ಬ್ಯಾಡರಹಳ್ಳಿ, ಬನ್ನಳ್ಳಿ, ತೊಪ್ಪನಹಳ್ಳಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಅಂದಾಜು 1.50 ಕೋಟಿ ವೆಚ್ಚದ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಕುಡಿಯುವ ನೀರಿನ ಜತೆಗೆ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗೂ ಹೆಚ್ಚಿನ ಕಾಳಜಿ ವಹಿಸಲಾಗುತ್ತಿದ್ದು, ಈಗಾಗಲೇ ಕೋಟ್ಯಂತರ ರೂ.ವೆಚ್ಚದಲ್ಲಿ ತಾಲೂಕಿನಾದ್ಯಂತ ಹಲವು ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.
ಮಂಗಳವಾರ ರಾತ್ರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಾಸಕರಿಗೆ ಬೆಂಗಳೂರಿನಲ್ಲಿ ಭೋಜನ ಕೂಟವನ್ನು ಏರ್ಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಭೋಜನ ಕೂಟ ಆಯೋಜಿಸಿದ್ದಾರೆ. ಇದರಲ್ಲಿ ಬೇರೆ ಯಾವುದೇ ರಾಜಕೀಯ ಉದ್ದೇಶಗಳಿಲ್ಲ ಎಂದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ಮುಖಂಡರಾದ ಕಿರಣ್, ಪುಟ್ಟಸ್ವಾಮಿ, ಮುತ್ತುರಾಜು, ಗುತ್ತಿಗೆದಾರ ಮಹೇಂದ್ರ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ದೇವಾನಂದ್ ಸೇರಿದಂತೆ ಹಲವರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net