ಗ್ರಾಮ ಪಂಚಾಯಿತಿ ಕಚೇರಿ, ಗ್ರಾಮ ಒನ್, ಕರ್ನಾಟಕ ಒನ್ ಮತ್ತು ವಾರ್ಡ್ ಮಟ್ಟದಲ್ಲಿ ಸಂಘ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ಸದಸ್ಯರ ವಯೋಮಿತಿ 16 ರಿಂದ 35 ವರ್ಷಗಳ ನಡುವೆ ಇರಬೇಕು. ಜು.30ರಿಂದ ನೋಂದಣಿ ಕಾರ್ಯ ಆರಂಭವಾಗಲಿದೆ. ಗ್ರಾಮ, ನಗರ ವ್ಯಾಪ್ತಿಗಳಲ್ಲಿ ಯುವಜನರ ಸಕ್ರಿಯ ಭಾಗವಹಿಸುವಿಕೆಯನ್ನು ಖಚಿತಪಡಿಸಿ, ಸಂಘಗಳ ರಚನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಡಿಸಿ, ಭಾರತ್ ಜೋಡೋ ಕಾರ್ಯಕ್ರಮದ ಬಗ್ಗೆ ಜನಸಾಮಾನ್ಯರು ಹಾಗೂ ಕಾಲೇಜುಗಳಲ್ಲಿ ಅರಿವು ಮೂಡಿಸಿ. ಮತ್ತು ಪ್ರಚಾರ ಕೈಗೊಳ್ಳಲು ಕ್ರಮ ಕೈಗೊಂಡು ನೋಂದಣಿ ಹೆಚ್ಚಾಗುವಂತೆ ಅಗತ್ಯ ಕ್ರಮ ವಹಿಸಬೇಕು ಎಂದರು.