ಬಡ ವಿದ್ಯಾರ್ಥಿಗಳಿಗೆ ಭಾರತೀ ಶಿಕ್ಷಣ ಸಂಸ್ಥೆ ನೆರವು

ಕೆ.ಎಂ.ದೊಡ್ಡಿಯ ಭಾರತೀ ಎಜುಕೇಷನ್ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಶಯ್ ಮಧು ಅವರು ಬಡ ವಿದ್ಯಾರ್ಥಿಗಳಿಗೆ ನೆರವಿನ ಚೆಕ್‌ಗಳನ್ನು ವಿತರಿಸಿದರು.
ಕೆ.ಎಂ.ದೊಡ್ಡಿಯ ಭಾರತೀ ಎಜುಕೇಷನ್ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಶಯ್ ಮಧು ಅವರು ಬಡ ವಿದ್ಯಾರ್ಥಿಗಳಿಗೆ ನೆರವಿನ ಚೆಕ್‌ಗಳನ್ನು ವಿತರಿಸಿದರು.
Published on

ಕೆ.ಎಂ.ದೊಡ್ಡಿ: ಆರ್ಥಿಕವಾಗಿ ಹಿಂದುಳಿದ ಹಾಗೂ ಗ್ರಾಮೀಣ ಪ್ರದೇಶಗಳ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡುವ ಉದ್ದೇಶದಿಂದ ಭಾರತೀ ಕಾಲೇಜು ವತಿಯಿಂದ 2025-26ನೇ ಸಾಲಿನಲ್ಲಿ 16 ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಯಿತು.

ಭಾರತೀ ಎಜುಕೇಷನ್ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಶಯ್ ಮಧು ಅವರು ಇತ್ತೀಚೆಗೆ ಬಡ ವಿದ್ಯಾರ್ಥಿಗಳಿಗೆ ಚೆಕ್‌ಗಳನ್ನು ವಿತರಿಸಿ ಮಾತನಾಡಿ, ಬಡವರು, ರೈತರು ಹಾಗೂ ಕಾರ್ಮಿಕರ ಮಕ್ಕಳಿಗೆ ಆರ್ಥಿಕ ನೆರವು ನೀಡುವ ಮೂಲಕ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಬೆಂಬಲ ನೀಡುತ್ತಿದೆ. ವಿದ್ಯಾರ್ಥಿಗಳು ಈ ನೆರವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದಬೇಕು ಎಂದು ಸಲಹೆ ನೀಡಿದರು.
ಆರ್ಥಿಕ ಸಂಕಷ್ಟದಿಂದಾಗಿ ಅನೇಕ ಬಡ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣ ಪೂರ್ಣಗೊಳಿಸುವುದೇ ಕಷ್ಟವಾಗುತ್ತಿದೆ. ಇದರಿಂದ ಅವರು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಇಂತಹ ವಿದ್ಯಾರ್ಥಿಗಳಿಗೆ ನೆರವು ನೀಡುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಎಸ್.ಮಹದೇವಸ್ವಾಮಿ, ಅಧೀಕ್ಷಕ ರಾಜು, ಉಪನ್ಯಾಸಕಿ ಸರಿತಾ, ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net