ವಸತಿ ಶಾಲೆ ಹೆಚ್ಚುವರಿ ಕೊಠಡಿಕಾಮಗಾರಿಗೆ ಭೂಮಿಪೂಜೆ

ಎ.ಬಿ.ರಮೇಶ ಬಂಡಿಸಿದ್ದೇಗೌಡ
SRP
ಪಟ್ಟಣದ ಮುಸ್ಲಿಂ ವಸತಿ ಶಾಲೆಯ ಆವರಣದಲ್ಲಿ ಗುರುವಾರ ಪಿಯು ಕಾಲೇಜು ವಿದ್ಯಾರ್ಥಿಗಳ ಅನೂಕೂಲಕ್ಕಾಗಿ 2 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಶಾಸಕ ಹಾಗೂ ಸೆಸ್ಕ್ ಅಧ್ಯಕ್ಷ ಎ.ಬಿ.ರಮೇಶ ಬಂಡಿಸಿದ್ದೇಗೌಡ ಭೂಮಿ ಪೂಜೆ ನೆರವೇರಿಸಿದರು. ಜಿಲ್ಲಾ ಸಹಕಾರ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ನಂದೀಶ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಎಂ.ಎಲ್.ದಿನೇಶ್, ನಿಮಿಷಾಂಬ ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಸ್.ಎನ್.ದಯಾನಂದ್ ಇದ್ದರು.school
Published on: 

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಶಕ್ತಿ ತುಂಬಿ ಸನ್ನದ್ಧಗೊಳಿಸಿದೆ ಎಂದು ಶಾಸಕ ಹಾಗೂ ಸೆಸ್ಕ್ ಅಧ್ಯಕ್ಷ ಎ.ಬಿ.ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.

ಪಟ್ಟಣದ ಮುಸ್ಲಿಂ ವಸತಿ ಶಾಲೆಯ ಆವರಣದಲ್ಲಿ ಗುರುವಾರ ಪಿಯು ಕಾಲೇಜು ವಿದ್ಯಾರ್ಥಿಗಳ ಅನೂಕೂಲಕ್ಕಾಗಿ 2 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯ, ನೀರಾವರಿ, ವಸತಿ, ರಸ್ತೆ-ಚರಂಡಿ ಸೇರಿದಂತೆ ವಿವಿಧ ಸೇವಾ-ಸೌಲಭ್ಯ ಮತ್ತು ಸಾಮಾಜಿಕ ಭದ್ರತೆಗಳನ್ನು ಜನರಿಗೆ ನಿರಂತರವಾಗಿ ಕಲ್ಪಿಸಿ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಸೆಸ್ಕ್‌ನಲ್ಲಿ ಅಧ್ಯಕ್ಷನಾದ ಬಳಿಕ ನನ್ನ ತಾಲೂಕು ಸೇರಿದಂತೆ ಮೈಸೂರು ವಿಭಾಗದಲ್ಲಿ ಗುಣಮಟ್ಟದ ವಿದ್ಯುತ್ ಅನ್ನು ಸಮರ್ಪಕವಾಗಿ ಗ್ರಾಹಕರಿಗೆ ಸರಬರಾಜುಗೊಳಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ. ಇನ್ನು ಕೂಡ ಸಾಕಷ್ಟು ಕಾಮಗಾರಿಗಳನ್ನು ತಾಲೂಕಿಗೆ ಹಂತ ಹಂತವಾಗಿ ತರಲಾಗುತ್ತಿದ್ದು, ಇವೆಲ್ಲವೂ ನಮ್ಮ ಜನರ ಅನುಕೂಲಕರ ಜೀವನಕ್ಕೆ ಒದಗಿಸಲು ಶ್ರಮಿಸಲಾಗುತ್ತಿದೆ. ಮುಸ್ಲಿಂ ವಸತಿ ಶಾಲೆಯಲ್ಲಿ ಒಟ್ಟು 264 ವಿದ್ಯಾರ್ಥಿಗಳ ಸಂಖ್ಯಾ ಬಲವಿದ್ದು, ಕಲ್ಪಿಸಲಾಗಿರುವ ಶಿಕ್ಷಣ ಸೇವೆಗಳ ಗುಣಮಟ್ಟದ ಶಿಕ್ಷಣದಿಂದ ಮಕ್ಕಳು ಉತ್ತಮ ಫಲಿತಾಂಶ ನೀಡುತ್ತಿದ್ದಾರೆ. ಈಗ ವಿಜ್ಞಾನ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಪಿಯುಸಿ ಕಾಲೇಜು ವಿದ್ಯಾರ್ಥಿಗಳ ಅನೂಕೂಲಕ್ಕಾಗಿ ಹೆಚ್ಚುವರಿಯಾಗಿ ಈ ಕೊಠಡಿಗಳ ನಿರ್ಮಾಣ ಮಾಡಲಾಗುತ್ತಿದ್ದು, ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿಗಳನ್ನು ನೀಡುವಂತೆ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಸಹಕಾರ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ನಂದೀಶ್, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಎಂ.ಎಲ್.ದಿನೇಶ್, ನಿಮಿಷಾಂಬ ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಸ್.ಎನ್.ದಯಾನಂದ್, ಟಿಎಪಿಸಿಎಂಎಸ್ ನಿರ್ದೇಶಕರಾದ ನಾಗರಾಜು, ಅರಕೆರೆ ಶಿವಯ್ಯ, ಪುರಸಭಾ ಮಾಜಿ ಸದಸ್ಯ ಗಂಜಾಂ ಕೃಷ್ಣಪ್ಪ, ನರಸಿಂಹೇಗೌಡ, ಯೂತ್ ಕಾಂಗ್ರೆಸ್ ಅಧ್ಯಕ್ಷ ರಜನಿಕಾಂತ್, ಗ್ಯಾರಂಟಿ ಸಮಿತಿ ನಿರ್ದೇಶಕ ಅನ್ಸಾರ್, ಸಾರ್ವಜನಿಕ ಆಸ್ಪತ್ರೆ ರಕ್ಷಾ ಸಮಿತಿ ದಸ್ಯ ಇಮ್ರಾನ್, ಮುಖಂಡರಾದ ಅಭಿಲಾಷ್, ಅಂಜುಮನ್ ಇಫ್ತಿಯಾದುಲ್ ಕಮಿಟಿ ಕಾರ್ಯದರ್ಶಿ ಸೈಯದ್ ಜುಲ್ಫೀಕರ್, ಗುಲಾಮ್ ದಸ್ತಗಿರ್ ಇತರರಿದ್ದರು.