ದೇವಸ್ಥಾನದಲ್ಲಿ ಕಾಮಗಾರಿಗೆ ಚಾಲನೆ: ಕಬ್ಬನಹಳ್ಳಿ ಗ್ರಾಮದಲ್ಲಿ ಮಲ್ಲಣ್ಣೇಶ್ವರ ದೇಗುಲ

ಮಂಡ್ಯ ತಾಲೂಕು ಕಬ್ಬನಹಳ್ಳಿ ಗ್ರಾಮದಲ್ಲಿ ಕಾಂಪೌಂಡ್ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಭೂಮಿ ಪೂಜೆ ನೆರವೇರಿಸಿದರು.
ಮಂಡ್ಯ ತಾಲೂಕು ಕಬ್ಬನಹಳ್ಳಿ ಗ್ರಾಮದಲ್ಲಿ ಕಾಂಪೌಂಡ್ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಭೂಮಿ ಪೂಜೆ ನೆರವೇರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಕಾಂಪೌಂಡ್ ಇಲ್ಲದ ಕಾರಣ ಆವರಣ ಸ್ವಚ್ಚವಾಗಿಡಲು ಸಾಧ್ಯವಾಗುತ್ತಿರಲಿಲ್ಲ
  • ಗ್ರಾಮಸ್ಥರ ಮನವಿ ಮೇರೆಗೆ ಶಂಕುಸ್ಥಾಪನೆ
ಮಂಡ್ಯ: ತಾಲೂಕಿನ ಕಬ್ಬನಹಳ್ಳಿ ಗ್ರಾಮದಲ್ಲಿ ಮಲ್ಲಣ್ಣೇಶ್ವರ ದೇವಸ್ಥಾನದ ಕಾಂಪೌಂಡ್ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ದೇವಸ್ಥಾನ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನ ನೀಡಿದ್ದು, ನಿಗದಿತ ಅವಧಿಯಲ್ಲಿ ಕಾಂಪೌಂಡ್ ನಿರ್ಮಾಣ ಕಾರ್ಯವನ್ನು ಪೂರೈಸಬೇಕು. ಕಾಂಪೌಂಡ್ ಇಲ್ಲದ ಕಾರಣ ಆವರಣ ಸ್ವಚ್ಚವಾಗಿಡಲು ಸಾಧ್ಯವಾಗುತ್ತಿರಲಿಲ್ಲ. ರಕ್ಷಣೆ ಇಲ್ಲದೆ ಸುತ್ತಮುತ್ತ ಅಶುಚಿತ್ವ ಮನೆ ಮಾಡಿತ್ತು. ದೇವಾಲಯಕ್ಕೆ ಸಂಬಂಧಿಸಿದ ಧಾರ್ಮಿಕ ಕಾರ‌್ಯಗಳನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಗ್ರಾಮಸ್ಥರ ಮನವಿ ಮೇರೆಗೆ ಕಾಂಪೌಂಡ್ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ. ಮೈಸೂರು ವಿಭಾಗ ವ್ಯಾಪ್ತಿಯ ನಾಲ್ಕೂ ಜಿಲ್ಲೆಗಳಲ್ಲಿ ಅನುದಾನ ಹಂಚಿಕೆ ಮಾಡಬೇಕಾಗಿರುವ ಕಾರಣ ಸ್ವಲ್ಪ ಮಟ್ಟಿಗೆ ಈ ಗ್ರಾಮದ ದೇವಾಲಯದ ಕಾಂಪೌಂಡ್ ನಿರ್ಮಾಣಕ್ಕೂ ಧನ ಸಹಾಯ ಮಾಡಲಾಗಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಶ್ರೀರಂಗಪಟ್ಟಣ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಮಾತನಾಡಿ, ನನ್ನ ಅನುದಾನದಲ್ಲಿ ಎಲ್ಲವನ್ನೂ ಮಾಡಲಾಗದು. ಇದಕ್ಕೆ ವಿಧಾನ ಪರಿಷತ್ ಸದಸ್ಯರ ಅನುದಾನವನ್ನೂ ಬಳಸಿಕೊಂಡಿರುವುದರಿಂದ ನಾನು ಬೇರೆ ಕಾಮಗಾರಿಗೆ ಅನುದಾನ ನೀಡಬಹುದು. ಮಧು ಅವರು ನೀಡಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಗುಣಮಟ್ಟದ ಕಾಂಪೌಂಡ್ ನಿರ್ಮಾಣಕ್ಕೆ ಮುಂದಾಗಬೇಕು. ಈಗಾಗಲೇ ಕಬ್ಬನಹಳ್ಳಿ ಗ್ರಾಮದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.
ಮುಖಂಡರಾದ ಚಿಕ್ಕಣ್ಣ, ಶಂಕರ್, ಮಲ್ಲೇಶ್, ಚಂದ್ರು, ಹೆಮ್ಮಿಗೆ ಸಿದ್ದಪ್ಪ, ಸತೀಶ್, ಎಚ್.ಕೆ. ಶಿವರಾಮು, ಸೂನಗಹಳ್ಳಿ ಜವರೇಗೌಡ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net