ಅನುದಾನಕ್ಕಾಗಿ ಸರ್ಕಾರದ ಜತೆ ದೊಡ್ಡ ಹೋರಾಟ

ಕಿಕ್ಕೇರಿ ಹೋಬಳಿಯ ಮಾದಿಹಳ್ಳಿ ಗ್ರಾಮದಲ್ಲಿ ಕೊಚ್ಚಿ ಹೋಗಿದ್ದ ಸೇತುವೆ ಮರು ನಿರ್ಮಾಣ ಕಾಮಗಾರಿಗೆ ಶಾಸಕ ಎಚ್.ಟಿ. ಮಂಜು ಚಾಲನೆ ನೀಡಿದರು. ಕೃಷ್ಣೇಗೌಡ, ಮಲ್ಲೇಶ್, ಶೇಖರ್, ಲಿಂಗರಾಜೇಗೌಡ ಮತ್ತಿತರರಿದ್ದರು.
ಕಿಕ್ಕೇರಿ ಹೋಬಳಿಯ ಮಾದಿಹಳ್ಳಿ ಗ್ರಾಮದಲ್ಲಿ ಕೊಚ್ಚಿ ಹೋಗಿದ್ದ ಸೇತುವೆ ಮರು ನಿರ್ಮಾಣ ಕಾಮಗಾರಿಗೆ ಶಾಸಕ ಎಚ್.ಟಿ. ಮಂಜು ಚಾಲನೆ ನೀಡಿದರು. ಕೃಷ್ಣೇಗೌಡ, ಮಲ್ಲೇಶ್, ಶೇಖರ್, ಲಿಂಗರಾಜೇಗೌಡ ಮತ್ತಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಚ್.ಟಿ.ಮಂಜು ಹೇಳಿಕೆ
  • ಮಾದಿಹಳ್ಳಿ ಹಳ್ಳದ ಸೇತುವೆ ಕಾಮಗಾರಿಗೆ ಭೂಮಿಪೂಜೆ
ಕಿಕ್ಕೇರಿ: ರಾಜ್ಯ ಸರ್ಕಾರದೊಂದಿಗೆ ದೊಡ್ಡ ಹೋರಾಟ ಮಾಡಿ ಗ್ರಾಮಗಳ ನಡುವೆ ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿಗೆ ಅನುದಾನ ತರಲಾಗಿದೆ ಎಂದು ಶಾಸಕ ಎಚ್.ಟಿ.ಮಂಜು ತಿಳಿಸಿದರು.
ಹೋಬಳಿಯ ಮಾದಿಹಳ್ಳಿ ಹಳ್ಳದ ಸೇತುವೆ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ನಾಲ್ಕು ವರ್ಷಗಳ ಹಿಂದೆ ಸುರಿದ ಕುಂಭದ್ರೋಣ ಮಳೆಯಿಂದ ಸೇತುವೆ ಕೊಚ್ಚಿ ಹೋಗಿ ಗ್ರಾಮಕ್ಕೆ ಸಂರ್ಪಕವೇ ಬಂದ್ ಆಗಿತ್ತು. ಇದೀಗ 2.75 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಈ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಕಾವೇರಿ ನೀರಾವರಿ ನಿಗಮದ ಮೂಲಕ ನಡೆದಿದ್ದು, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು. ಈ ಭಾಗದ ಸಾರ್ವಜನಿಕರು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಬೇಕು ಎಂದರು.
ಕಾವೇರಿ ನೀರಾವರಿ ನಿಗಮದ ಹೇಮಾವತಿ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಜಯರಾಂ, ಎಇಇ ರಾಕೇಶ್, ಜೆಡಿಎಸ್ ಹೋಬಳಿ ಘಟಕದ ಅಧ್ಯಕ್ಷ ಕಾಯಿ ಮಂಜೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್, ತಾ.ಪಂ. ಮಾಜಿ ಸದಸ್ಯ ಕೃಷ್ಣೇಗೌಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶೇಖರ್, ಮುಖಂಡರಾದ ಕಳ್ಳನಕೆರೆ ಲಿಂಗರಾಜೇಗೌಡ, ಜೆಸಿಬಿ ನಾಗೇಶ್ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net