ಅಪಘಾತದಲ್ಲಿ ಬೈಕ್ ಸವಾರ ಮೃತ

ತೇಜಸ್
ತೇಜಸ್
Published on
ಕೆ.ಆರ್.ಸಾಗರ: ಇಲ್ಲಿನ ಸಂತೆಮಾಳ ಮುಂಭಾಗದ ಮುಖ್ಯ ರಸ್ತೆಯಲ್ಲಿ ತೆರಳುತ್ತಿದ್ದ ಗೂಡ್ಸ್ ಆಟೋಗೆ ಹಿಂದಿನಿಂದ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟಿದ್ದಾರೆ.
ಮೈಸೂರಿನ ಬಿಎಂಶ್ರೀ ನಗರದ ನಿವಾಸಿ ತೇಜಸ್ (19) ಮೃತಪಟ್ಟ ಯುವಕ.
ಮೈಸೂರಿನ ಕೇನ್ಸ್ ಟೆಕ್ನಾಲಜಿ-1 ರಲ್ಲಿ ತೇಜಸ್ ಕೆಲಸ ಮಾಡುತ್ತಿದ್ದು, ಸ್ನೇಹಿತನೊಂದಿಗೆ ಕೆ.ಆರ್.ಸಾಗರದ ಹಿನ್ನೀರಿನ ವೇಣುಗೋಪಾಲ ಸ್ವಾಮಿ ದೇವಾಲಯದ ಕಡೆಗೆ ತೆರಳುತ್ತಿದ್ದ. ಈ ಸಂದರ್ಭದಲ್ಲಿ ವೇಗವಾಗಿದ್ದ ಸ್ಕೂಟರ್ ನಿಯಂತ್ರಣಕ್ಕೆ ಸಿಗದ ಹಿನ್ನೆಲೆಯಲ್ಲಿ ಗೂಡ್ಸ್ ಆಟೋಗೆ ಹಿಂದಿನಿಂದ ಡಿಕ್ಕಿ ಹೊಡಿದಿದೆ. ಹಿಂಬದಿಯಲ್ಲಿ ಕುಳಿತಿದ್ದ ಪ್ರಜ್ವಲ್ಗೂ ಕೂಡ ಸಣ್ಣ ಪುಟ್ಟ ಏಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದ ಹಿನ್ನೆಲೆಯಲ್ಲಿ ತೇಜಸ್‌ನನ್ನು ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ಕೊಂಡೊಯ್ದು ನಂತರ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಬದುಕುಳಿಯಲಿಲ್ಲ.
ಕೆ.ಆರ್.ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net