ಎಲ್ಲರಿಗೂ ಉಚಿತ ಶಿಕ್ಷಣ ಸಿಗುವಂತಾಗಲಿ: ಡಾ.ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಬಿ.ಎಸ್ ಶಿವಣ್ಣ ಅಭಿಮತ

ಮಂಡ್ಯದ ಸರ್ಕಾರಿ ಮಹಿಳಾ ಕಾಲೇಜಿ(ಸ್ವಾಯತ್ತ)ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಡಾ.ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಬಿ.ಎಸ್.ಶಿವಣ್ಣ ಉದ್ಘಾಟಿಸಿದರು.
ಮಂಡ್ಯದ ಸರ್ಕಾರಿ ಮಹಿಳಾ ಕಾಲೇಜಿ(ಸ್ವಾಯತ್ತ)ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಡಾ.ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಬಿ.ಎಸ್.ಶಿವಣ್ಣ ಉದ್ಘಾಟಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಸಮಾಜವಾದಿ ಚಿಂತಕ ಡಾ.ರಾಮ ಮನೋಹರ ಲೋಹಿಯಾ ಜನ್ಮದಿನಾಚರಣೆ
  • ಸರ್ಕಾರಿ ಮಹಿಳಾ ಕಾಲೇಜಿ(ಸ್ವಾಯತ್ತ)ನಲ್ಲಿ ಆಯೋಜನೆ
ಮಂಡ್ಯ: ಪ್ರತಿಯೊಬ್ಬರಿಗೂ ಉಚಿತವಾದ ಸಮಾನ ಶಿಕ್ಷಣ ಸಿಗಬೇಕು. ಇಂದಿರಾಗಾಂಧಿ ಅವರು ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿದ ರೀತಿ ಕಾನ್ವೆಂಟ್‌ಗಳನ್ನು ರಾಷ್ಟ್ರೀಕರಣ ಮಾಡಿದರೆ ಸಮಾನತೆ ಹೆಚ್ಚಾಗುತ್ತದೆ ಎಂದು ಡಾ.ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಬಿ.ಎಸ್ ಶಿವಣ್ಣ ಹೇಳಿದರು.
ನಗರದ ಸರ್ಕಾರಿ ಮಹಿಳಾ ಕಾಲೇಜಿ(ಸ್ವಾಯತ್ತ)ನ ಮೌಲ್ಯಮಾಪನ ಸಭಾಂಗಣದಲ್ಲಿ ಭೂಮಿ ಬೆಳಗು ಸಾಂಸ್ಕೃತಿಕ ಸಂಘ, ಮಹಿಳಾ ಸರ್ಕಾರಿ ಕಾಲೇಜಿನ ರಾಜ್ಯಶಾಸ್ತ್ರ ಮತ್ತು ಸಾರ್ವಜನಿಕ ಆಡಳಿತ ವಿಭಾಗದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಸಮಾಜವಾದಿ ಚಿಂತಕ ಡಾ.ರಾಮ ಮನೋಹರ ಲೋಹಿಯಾ ಅವರ 116ನೇ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಲೋಹಿಯಾ, ಗಾಂಧಿ, ಅಂಬೇಡ್ಕರ್ ವಿಚಾರಧಾರೆಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ತಿಳಿಸಿದರು.
ಲಿಂಗಭೇದದ ವಿರುದ್ಧ, ಮಹಿಳೆಯರಿಗೆ ಸಮಾನ ಹಕ್ಕುಗಳು, ರಾಜಕೀಯ ಮೀಸಲಾತಿ ಸಿಗಬೇಕು, ಅಂತರ್ಜಾತಿ ವಿವಾಹಗಳಾಗಬೇಕು ಎಂದು ಅಂದೇ ಲೋಹಿಯಾ ಅವರು ಹೋರಾಟ ಮಾಡಿದವರು. ಅವರು ವಿಶ್ವದ ಮಹಾನ್ ಚಿಂತಕರು. ಎರಡು ಬಾರಿ ಅಮೆರಿಕದ ಅಧ್ಯಕ್ಷರಾಗಿದ್ದ ಒಬಮಾ ಆಡಳಿತದಲ್ಲಿ ಸುಂದರವಾದ ಹೊಸ ಮನ್ವಂತರ ಪ್ರಾರಂಭಿಸಿದರು. ಆದರೆ ಈಗಿನ ಅಧ್ಯಕ್ಷ ಟ್ರಂಪ್ ಅವರು ಸ್ವಾರ್ಥಕ್ಕೋಸ್ಕರ ಸಂಪನ್ಮೂಲವನ್ನು ಆಕ್ರಮಿಸಿಕೊಳ್ಳಲಿಕ್ಕೆ ನಡೆಸುತ್ತಿರುವ ಆಕ್ರಮಣಕಾರಿ ಪದ್ಧತಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದರು.
ಮಹಿಳಾ ಸರ್ಕಾರಿ ಕಾಲೇಜು ಪ್ರಾಂಶುಪಾಲ ಪ್ರೊ.ಕೆ.ಗುರುರಾಜ್‌ಪ್ರಭು ಅಧ್ಯಕ್ಷತೆ ವಹಿಸಿದರು. ಭೂಮಿ ಬೆಳಗು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಮಂಗಲ ಎಂ.ಯೋಗೀಶ್, ಕವಿ ಕೆ.ಪಿ.ಮೃತ್ಯುಂಜಯ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎಂ.ವಿ.ಧರಣೇಂದ್ರಯ್ಯ, ಚಿಂತಕ ಅರವಿಂದ ಪ್ರಭು, ರಾಜ್ಯಶಾಸ್ತ್ರ ಮತ್ತು ಸಾರ್ವಜನಿಕ ಆಡಳಿತ ವಿಭಾಗದ ಮುಖ್ಯಸ್ಥ ಪ್ರೊ.ಭರತ್‌ರಾಜ್, ಸಹ ಪ್ರಾಧ್ಯಾಪಕರಾದ ದಾನೇಗೌಡ, ಎಲ್.ಪೂರ್ಣಿಮಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net