ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜನ್ಮದಿನ ಆಚರಣೆ

ಮಳವಳ್ಳಿ ಪಟ್ಟಣದಲ್ಲಿ ಜೆಡಿಎಸ್ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜನ್ಮ ದಿನದ ಅಂಗವಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಾಲು ವಿತರಿಸಲಾಯಿತು. ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಡಿ.ಜಯರಾಮು, ಹನುಮಂತು, ನಂದಕುಕುಮಾರ್, ಪುಟ್ಟರಾಮು, ಚಂದಳ್ಳಿ ಶ್ರೀಧರ್, ಸಿದ್ದಾಚಾರಿ, ಕಾಂತರಾಜು, ಮಧು ಇದ್ದರು.

Published on
ಮಳವಳ್ಳಿ: ರಾಜ್ಯದ ರೈತರು ಹಾಗೂ ಕಾವೇರಿ ನದಿ ನೀರಿನ ವಿಚಾರವಾಗಿ ನಿರಂತರವಾಗಿ ಹೋರಾಟ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ರೈತರಿಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ ಎಂದು ಮಾಜಿ ಶಾಸಕ ಡಾ.ಕೆ.ಅನ್ನದಾನಿ ಹೇಳಿದರು.
ಪಟ್ಟಣದ ಕೋಟೆ ಬೀದಿಯಲ್ಲಿರುವ ಗವಿಗಂಗಾಧರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಎಚ್.ಡಿ.ದೇವೇಗೌಡ ಅವರ 94ನೇ ಹುಟ್ಟು ಹಬ್ಬದ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿ, ನೆಲ-ಜಲ, ರೈತರ ಪರವಾಗಿ ತಮ್ಮ ಜೀವನದುದ್ದಕ್ಕೂ ಹೋರಾಟ ಮಾಡಿಕೊಂಡು ಬಂದಿದ್ದಾರೆ. ತಮ್ಮ ಇಳಿವಯಸ್ಸಿನಲ್ಲೂ ರಾಜ್ಯಸಭೆಯಲ್ಲಿ ರಾಜ್ಯದ ರೈತರು ಮತ್ತು ಕಾವೇರಿ ನದಿ ವಿಚಾರವಾಗಿ ಮಾತನಾಡುತ್ತಾರೆ. ನಮ್ಮ ನಾಡು, ದೇಶಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದರು.
ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು, ಹಾಲು ವಿತರಿಸಲಾಯಿತು. ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಹನುಮಂತು, ಮುಖಂಡರಾದ ಡಿ.ಜಯರಾಮು, ನಂದಕುಮಾರ್, ಪುಟ್ಟರಾಮು, ಮಧು, ಚಂದಳ್ಳಿ ಶ್ರೀಧರ್, ಸಿದ್ದಾಚಾರಿ, ಬಿ.ಎಂ.ಕಾಂತರಾಜು, ಕುಂತೂರು ಸೋಮಶೇಖರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net