ಶಾಸಕ ಉದಯ್ ಹುಟ್ಟುಹಬ್ಬ ಆಚರಣೆ

ಶಾಸಕ ಕೆ.ಎಂ.ಉದಯ್ ಅವರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಮುಖಂಡರು ತಾಲೂಕಿನ ನಿಲುವಾಗಿಲು ಗ್ರಾಮದ ಯೋಗ ನರಸಿಂಹಸ್ವಾಮಿ ದೇಗುದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮಾರಸಿಂಗನಹಳ್ಳಿ ರಾಮಚಂದ್ರು, ಗೋವಿಂದರಾಜು, ಪಿ.ಸಂದರ್ಶ, ಶರತ್, ಕೆ.ಎಂ.ರವಿ ಇದ್ದರು.
ಶಾಸಕ ಕೆ.ಎಂ.ಉದಯ್ ಅವರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಮುಖಂಡರು ತಾಲೂಕಿನ ನಿಲುವಾಗಿಲು ಗ್ರಾಮದ ಯೋಗ ನರಸಿಂಹಸ್ವಾಮಿ ದೇಗುದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮಾರಸಿಂಗನಹಳ್ಳಿ ರಾಮಚಂದ್ರು, ಗೋವಿಂದರಾಜು, ಪಿ.ಸಂದರ್ಶ, ಶರತ್, ಕೆ.ಎಂ.ರವಿ ಇದ್ದರು.
Published on
ಮದ್ದೂರು: ಬ್ಲಾಕ್ ಕಾಂಗ್ರೆಸ್‌ನಿಂದ ಸೋಮವಾರ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಶಾಸಕ ಕೆ.ಎಂ.ಉದಯ್ ಅವರ 52ನೇ ವರ್ಷದ ಹುಟ್ಟುಹಬ್ಬ ಆಚರಿಸಲಾಯಿತು.
ನಗರ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವನಾಥ ದೇವಾಲಯದಲ್ಲಿ ಕೆ.ಎಂ.ಉದಯ್ ಅವರ ಹೆಸರಿನಲ್ಲಿ ವಿಶೇಷ ಪೂಜೆ ಹಾಗೂ ರುದ್ರಾಭಿಷೇಕ ನಡೆಸಲಾಯಿತು. ಭಕ್ತಾದಿಗಳಿಗೆ ಉಪಹಾರ ಹಾಗೂ ಸಿಹಿ ವಿತರಿಸಲಾಯಿತು.
ನಂತರ ನಗರದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯ ಒಗ ರೋಗಿಗಳಿಗೆ ಹಣ್ಣು ಹಾಗೂ ಬಾದಾಯಿ ಹಾಲು ವಿತರಿಸಲಾಯಿತು. ತಾಲೂಕಿನ ನಿಡಘಟ್ಟದಲ್ಲಿರುವ ಶ್ರೀ ಗುರುದತ್ತ ಆಶ್ರಮ ಬಾಲಕರ ಬಾಲ ಮಂದಿರದ ಮಕ್ಕಳಿಗೆ ಹಣ್ಣು ವಿತರಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೈಲೂರು ಚಲುವರಾಜು ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ನವ ಮದ್ದೂರು ನಿರ್ಮಾಣದ ಕನಸುಗಾರರಾಗಿ ಹಗಲಿರಳು ಶ್ರಮಿಸುತ್ತಿದ್ದಾರೆ. ಶಾಸಕರಾದ ಮೂರೇ ವರ್ಷದಲ್ಲಿ 2 ಸಾವಿರ ಕೋಟಿ ರೂ.ಗೂ ಅಧಿಕ ಅನುದಾನ ತಂದು ತಾಲೂಕಿನಲ್ಲಿ ಅಭಿವೃದ್ಧಿ ಪರ್ವ ಆರಂಭಿಸಿರುವುದನ್ನು ಕ್ಷೇತ್ರ ಜನರು ನೋಡುತ್ತಿದ್ದಾರೆ. ಮುಂದೆಯೂ ಮತ್ತಷ್ಟು ಅನುದಾನ ತಂದು ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿ ಮಾಡಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಶಾಸಕರ ಹುಟ್ಟುಹಬ್ಬದ ಅಂಗವಾಗಿ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ದೇವರು ಅವರಿಗೆ ಆಯಸ್ಸು, ಆರೋಗ್ಯ, ಐಶ್ವರ್ಯ ಹಾಗೂ ರಾಜಕೀಯದಲ್ಲಿ ಉನ್ನತ ಸ್ಥಾನ ಕಲ್ಪಿಸಲಿ ಎಂದು ಹಾರೈಸಿದರು.
ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್‌ನ ಟ್ರಸ್ಟಿಗಳಾದ ಕೆ.ಎಂ.ರವಿ, ಸಿಪಾಯಿ ಶ್ರೀನಿವಾಸ್, ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್‌ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ನಗರಸಭಾ ಮಾಜಿ ಅಧ್ಯಕ್ಷೆ ಕೋಕಿಲಾ ಅರುಣ್, ಮಾಜಿ ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಮಾಜಿ ಸದಸ್ಯರಾದ ಸರ್ವಮಂಗಳಾ, ಬಸವರಾಜು, ಸಿದ್ದರಾಜು, ಗ್ರಾಪಂ ಮಾಜಿ ಅಧ್ಯಕ್ಷ ತಿಮ್ಮೇಗೌಡ, ಮುಖಂಡರಾದ ಮಮತಾಶಂಕರೇಗೌಡ, ದೇಶಹಳ್ಳಿ ಮೋಹನ್‌ಕುಮಾರ್, ಮಹದೇವಯ್ಯ, ಶರತ್, ಮನು, ಹೊಂಬಯ್ಯ, ಫೈರೋಜ್, ರಾಜೇಶ್, ಯತೀಶ್ ಇತರರು ಇದ್ದರು.
ಭಕ್ತರಿಗೆ ಅನ್ನಸಂತರ್ಪಣೆ : ಮದ್ದೂರು: ಶಾಸಕ ಕೆ.ಎಂ.ಉದಯ್ ಅವರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಮುಖಂಡರು ತಾಲೂಕಿನ ನಿಲುವಾಗಿಲು ಗ್ರಾಮದ ಯೋಗ ನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು
ಮುಖಂಡ ಮಾರಸಿಂಗನಹಳ್ಳಿ ರಾಮಚಂದ್ರು ಮಾನತಾಡಿ, ಶಾಸಕ ಕೆ.ಎಂ.ಉದಯ್ ಅವರು ಶಾಸಕರಾದ ನಂತರ ಕ್ಷೇತ್ರದಲ್ಲಿ ಪ್ರತಿಯೊಂದು ಹಳ್ಳಿಗಳ ಅಭಿವೃದ್ಧಿಗೂ ವಿಶೇಷ ಆದ್ಯತೆ ನೀಡುತ್ತಿರುವುದು ಸಂತೋಷ ತಂದಿದೆ ಎಂದರು.
ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮುಖಂಡರಾದ ಮಾರಸಿಂಗನಹಳ್ಳಿ ರಾಮಚಂದ್ರು, ಗೋವಿಂದರಾಜು, ಸಂದೀಪ್, ಯೋಗೇಶ್, ರವಿ, ಪಟೇಲ್ ರಾಜು, ಮುಳ್ಳಹಳ್ಳಿ ನವೀನ್, ಮುದಿಗೆರೆ ಕಿರಣ್, ಗಿತಾ, ಪ್ರೇಮಮ್ಮ, ಸಹನಾ, ನಂಜೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net