ಕಳಪೆ ಕಾಮಗಾರಿ ಖಂಡಿಸಿ ಬಿಜೆಪಿ ಪ್ರತಿಭಟನೆ

ಲೋಕೋಪಯೋಗಿ ಇಲಾಖೆ ಪಟ್ಟಣದಲ್ಲಿ ನಿರ್ವಹಿಸಿರುವ ರಸ್ತೆ ಕಾಮಗಾರಿ ಮತ್ತು ವಿದ್ಯುತ್ ದೀಪ ಅಳವಡಿಕೆ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎಚ್.ಎನ್.ಮಂಜುನಾಥ್, ಸೀತಾರಾಮ್ ಇತರರು ಇದ್ದರು.
ಲೋಕೋಪಯೋಗಿ ಇಲಾಖೆ ಪಟ್ಟಣದಲ್ಲಿ ನಿರ್ವಹಿಸಿರುವ ರಸ್ತೆ ಕಾಮಗಾರಿ ಮತ್ತು ವಿದ್ಯುತ್ ದೀಪ ಅಳವಡಿಕೆ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎಚ್.ಎನ್.ಮಂಜುನಾಥ್, ಸೀತಾರಾಮ್ ಇತರರು ಇದ್ದರು.
Published on
ಪಾಂಡವಪುರ : ಪಟ್ಟಣದಲ್ಲಿ ಲೋಕೋಪಯೋಗಿ ಇಲಾಖೆ ನಿರ್ವಹಿಸಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಸೆಸ್ಕ್ ವತಿಯಿಂದ ನಡೆದಿರುವ ವಿದ್ಯುತ್ ದೀಪಗಳ ಅಳವಡಿಕೆ ಕಾಮಗಾರಿ ಕಳಪೆಯಿಂದ ಕೂಡಿವೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಸೆಸ್ಕ್ ಕಚೇರಿ ಮುಂಭಾಗ ಮುಖಂಡ ಎಚ್.ಎನ್.ಮಂಜುನಾಥ್ ನೇತೃತ್ವದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು, ಪಟ್ಟಣ ವ್ಯಾಪ್ತಿಯಲ್ಲಿ ಇಲಾಖೆ ವತಿಯಿಂದ ನಿರ್ವಹಿಸಿರುವ ಬಹುತೇಕ ರಸ್ತೆ ಕಾಮಗಾರಿಗಳಲ್ಲಿ ಒಂದಿಷ್ಟು ಗುಣಮಟ್ಟವಿಲ್ಲ. ಜತೆಗೆ ಪಟ್ಟಣದ ಐದು ದೀಪ ವೃತ್ತದಿಂದ ಹಾರೋಹಳ್ಳಿ ಕೆಎಚ್‌ಬಿ ಕಾಲನಿವರೆಗೆ ಅಳವಡಿಸಿರುವ ವಿದ್ಯುತ್ ದೀಪಗಳ ಕಾಮಗಾರಿ ಕೂಡ ಕಳಪೆಯಾಗಿದೆ. ಇದರಲ್ಲಿ ಅಳವಡಿಸಲಾಗಿರುವ ಕೇಬಲ್ ಭೂಮಿ ಮಟ್ಟದಲ್ಲಿದ್ದು, ಅಗತ್ಯಕ್ಕೆ ತಕ್ಕಂತೆ ಗುಂಡಿ ತೆಗೆದು ಕೇಬಲ್ ಅಳವಡಿಸಿಲ್ಲ. ಇದರಿಂದ ವಿದ್ಯುತ್ ಅವಘಡಗಳು ಸಂಭವಿಸುವ ಅಪಾಯವಿದೆ. ಈ ಕಳಪೆ ವಿದ್ಯುತ್ ಕೇಬಲ್ ಅಳವಡಿಕೆಯಿಂದ ಅವಘಡ ಸಂಭವಿಸಿದರೆ ಸರ್ಕಾರ ಹೊಣೆ ಹೊರಬೇಕಾಗುತ್ತದೆ. ಕಾಮಗಾರಿ ನಿರ್ವಹಣೆಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಸಂಪೂರ್ಣ ನಿರ್ಲಕ್ಷೃ ಎದ್ದು ಕಾಣುತ್ತಿದೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.
ಕಳಪೆ ಕಾಮಗಾರಿ ಬಗ್ಗೆ ಪ್ರಶ್ನೆ ಮಾಡಲು ಅಧಿಕಾರಿಗಳಿಗೆ ಕರೆ ಮಾಡಿದರೆ ಅವರು ಕೆಲವು ವಿಚಾರಗಳ ಬಗ್ಗೆ ಸಮರ್ಪಕ ಉತ್ತರ ನೀಡುತ್ತಿಲ್ಲ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಒಬ್ಬರಿಗೊಬ್ಬರೂ ಹಾರಿಕೆ ಉತ್ತರ ನೀಡುತ್ತಾರೆ ಎಂದು ದೂರಿದರು.
ಒಂದು ವಾರದೊಳಗೆ ಭೂಮಿ ಮಟ್ಟದಲ್ಲಿರುವ ವಿದ್ಯುತ್ ದೀಪಗಳ ಅಳವಡಿಕೆ ಸಮಸ್ಯೆಯನ್ನು ಬಗೆಹರಿಸದಿದ್ದರೆ ಎಇಇ ಜಯಕುಮಾರ್ ಅವರ ಅಮಾನತಿಗೆ ಆಗ್ರಹಿಸಿ ರಸ್ತೆ ತಡೆ ಚಳವಳಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ವೇಳೆ ತ್ಯಾಗರಾಜ ಕಾಲನಿ ಸೀತಾರಾಂ, ಬಿಜೆಪಿ ಮುಖಂಡರಾದ ಎಚ್.ಕೆ.ದೊರೆಸ್ವಾಮಿ, ಆರ್.ಚನ್ನಕೇಶವ, ಹಿರೇಮರಳಿ ಶೀನಪ್ಪ, ಎನ್.ಭಾಸ್ಕರ್, ಟಿ.ಎಸ್.ಛತ್ರ ಮಹೇಶ್, ಮಧು ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net