ಬಿಜೆಪಿಯಿಂದ ಅನಿರ್ದಿಷ್ಟಾವಧಿ ಮುಷ್ಕರ: ಶುಭಾಷಯ ಕೋರುವ ಫ್ಲೆಕ್ಸ್ ತೆರವಿಗೆ ಆಕ್ರೋಶ

ಕೆ.ಆರ್.ಪೇಟೆ ಪಟ್ಟಣದ ಪುರಸಭೆ ಕಚೇರಿ ಎದುರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೆ.ಆರ್.ಪೇಟೆ ಪಟ್ಟಣದ ಪುರಸಭೆ ಕಚೇರಿ ಎದುರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಮುಖ್ಯಾಧಿಕಾರಿ ಅಶೋಕ್ ವಿರುದ್ಧ ಆಕ್ರೋಶ
  • ತೆರಿಗೆ ಪಾವತಿಸಿ ಕೊಳ್ಳದೇ ಅನುಮತಿ ಪತ್ರ ನೀಡಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡುತ್ತಿರುವ ಆರೋಪ
ಕೆ.ಆರ್.ಪೇಟೆ: ಹಬ್ಬಗಳಿಗೆ ಶುಭಾಷಯ ಕೋರಲು ಬಿಜೆಪಿಯಿಂದ ಪಟ್ಟಣದಲ್ಲಿ ಅಳವಡಿಸಿರುವ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿರುವುದನ್ನು ಖಂಡಿಸಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ಪುರಸಭೆ ಕಚೇರಿ ಎದುರು ಧರಣಿ ನಡೆಸುತ್ತಿರುವ ಕಾರ್ಯಕರ್ತರು ಘೋಷಣೆ ಕೂಗಿದರು. ಪುರಸಭಾ ಮಾಜಿ ಸದಸ್ಯ ಬಸ್ ಸಂತೋಷ್ ಮಾತನಾಡಿ, ಮುಖ್ಯಾಧಿಕಾರಿ ಅಶೋಕ್ ತಮ್ಮ ಆಧಿಕಾರ ದುರ್ಬಳಕೆ ಮಾಡಿಕೊಂಡು ಶಾಸಕರ ಪ್ರಭಾವಕ್ಕೆ ಒಳಗಾಗಿ ಬಿಜೆಪಿ ಪಕ್ಷದ ವತಿಯಿಂದ ಹಾಕಿದ್ದ ಶುಭಾಷಯದ ಫ್ಲೆಕ್ಸ್‌ಗಳನ್ನು ಏಕಾಏಕಿ ತೆರವುಗೊಳಿಸಿ ದರ್ಪ ಮೆರೆಯುತ್ತಿದ್ದಾರೆ. ಜತೆಗೆ ತೆರಿಗೆ ಪಾವತಿಸಿ ಕೊಳ್ಳದೇ ಅನುಮತಿ ಪತ್ರ ನೀಡಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿ ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡಿದ್ದಾರೆಂದು ಆರೋಪಿಸಿದರು.
ಪುರಸಭೆಯ ದೈನಂದಿನ ಆಡಳಿತ ವ್ಯವಹಾರಗಳಲ್ಲಿ ನಿರಂತರವಾಗಿ ಜನರ ಕೆಲಸ ಕಾರ್ಯಗಳನ್ನು ವಿಳಂಬ ಮಾಡಿ ತೊಂದರೆ ನೀಡುವ ಮುಖ್ಯಾಧಿಕಾರಿ ಅಶೋಕ್ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಮುಡಾ ಮಾಜಿ ಅಧ್ಯಕ್ಷ ಕೆ.ಶ್ರೀನಿವಾಸ್, ಪ್ರಮೋದ್, ಎಚ್.ಆರ್.ಲೋಕೇಶ್, ಮಾಜಿ ಸದಸ್ಯ ವಿನೋದ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಸುನಿಲ್, ಮಾಜಿ ನಿರ್ದೇಶಕ ಕೈಗೋನಹಳ್ಳಿ ಕುಮಾರ್, ಮಾಜಿ ಅಧ್ಯಕ್ಷ ಪಾಪಣ್ಣ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net