ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ವಿರುದ್ಧ ಆಕ್ರೋಶ: ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

 ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Published on
ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಮೆಲೊನಿಗೆ ಮೆಲೋಡಿ ಚಾಕೊಲೇಟ್ ನೀಡಿರುವ ಬಗ್ಗೆ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ವ್ಯಂಗ್ಯ ಮಾಡಿರುವುದನ್ನು ಖಂಡಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿಲ್ಲಾ ಅಂಚೆ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಮಹಿಳೆಯೊಬ್ಬರಿಗೆ ಸಿಗರೇಟು ಹಚ್ಚಿಕೊಡುತ್ತಿರುವ ಹಾಗೂ ವಿದೇಶಿ ಮಹಿಳೆಯರ ಜತೆಯಲ್ಲಿರುವ ಫೋಟೋಗಳನ್ನು ಎಐಸಿಸಿ ಕಚೇರಿ ಹಾಗೂ ಬಿ.ಕೆ.ಹರಿಪ್ರಸಾದ್‌ಗೆ ಅಂಚೆ ಮೂಲಕ ಕಳಿಸಿಕೊಟ್ಟರು. ಅಂತೆಯೇ ನರೇಂದ್ರಮೋದಿ ಹಾಗೂ ಮೆಲೊನಿ ಅವರ ರಾಜ ತಾಂತ್ರಿಕತೆಯ ನಗುವಲ್ಲಿ ರಾಸಲೀಲೆ ಹುಡುಕುವ ಕಾಮಾಲೆ ಕಣ್ಣಿನ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಬಿ.ಕೆ. ಹರಿಪ್ರಸಾದ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವಿಶ್ವ ವಂದಿತ ನಾಯಕ ಹಾಗೂ ಹಲವಾರು ದೇಶಗಳಿಂದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದಿರುವ ನಾಯಕನಿಗೆ ಮಾಡುವ ಅಪಮಾನವಲ್ಲ. ಇದು ದೇಶಕ್ಕೆ ಮಾಡುವ ಅಪಮಾನ, ದೇಶದ ನಾಗರಿಕರಿಗೆ ಮಾಡುವ ಅಪಮಾನ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರಿನ ವೇದಿಕೆ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರು ಮುತ್ತು ಕೊಟ್ಟಿದ್ದನ್ನು ಅಭಿಮಾನದಿಂದ ಕೊಟ್ಟ ಮುತ್ತು ಎನ್ನಬೇಕೇ ಹೊರತು, ಅದನ್ನು ಕಾಮಾಲೆ ಕಣ್ಣಿನಿಂದ ನೋಡಲಾಗುತ್ತದೆಯೇ?. ಕಾಂಗ್ರೆಸ್ಸಿಗರಿಗೆ ನರೇಂದ್ರ ಮೋದಿ ಅವರ ವರ್ಚಸ್ಸು ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವುದನ್ನು ನೋಡಿ ಸಹಿಸದೆ ಹಾಗೂ ನಿರಂತರ ಸೋಲಿನಿಂದ ಹತಾಶರಾಗಿ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ವಕ್ತಾರ ಸಿ.ಟಿ.ಮಂಜುನಾಥ್, ನಗರ ಘಟಕದ ಅಧ್ಯಕ್ಷ ಪ್ರಸನ್ನ, ಮುಖಂಡರಾದ ಹೊಸಹಳ್ಳಿ ಶಿವು, ಶಿವಲಿಂಗಯ್ಯ, ವೆಂಕಟೇಶ್, ಗೊರವಾಲೆ ಶಿವಣ್ಣ, ಕಲ್ಲೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net