ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ಸರ್ಕಾರ ಮಂಡಿಸಿದ ಮೀಸಲು ಮಸೂದೆ ಬೆಂಬಲಿಸದ ವಿಪಕ್ಷಗಳು ಮಹಿಳೆಯರನ್ನು ಅವಮಾನಿಸಿದೆ. ಈ ಮೂಲಕ ಮಹಿಳೆಯರ ಶಕ್ತಿ, ಸಾರ್ಮಥ್ಯವನ್ನು ಲಘುವಾಗಿ ಪರಿಗಣಿಸಿವೆ. ಆದರೆ ಕಾಂಗ್ರೆಸ್ ಸೇರಿದಂತೆ ಐಎನ್‌ಡಿಐಎ ಒಕ್ಕೂಟದ ನಡೆಯನ್ನು ದೇಶದ ಮಹಿಳೆಯರು ಗಮನಿಸುತ್ತಿದ್ದಾರೆ. ಮಹಿಳಾ ವಿರೋಧಿ ಧೋರಣೆಯ ಬಗ್ಗೆ ಸೂಕ್ಷ್ಮವಾಗಿ ತಿಳಿದುಕೊಳ್ಳುತ್ತಿದ್ದಾರೆ. ಇಂತಹ ನಡೆಗೆ ಮುಂದಿನ ದಿನದಲ್ಲಿ ಐಎನ್‌ಡಿಐಎ ಒಕ್ಕೂಟಕ್ಕೆ ನಾರಿಯರು ತಮ್ಮ ಶಕ್ತಿ ತೋರಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.