ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ರಕ್ತದಾನ ಮಾಡುವ ಮೂಲಕ ಮಾದರಿಯಾದರು. ಅಂತೆಯೇ ಪ್ರಾಂಶುಪಾಲ ಡಾ.ಎನ್.ಎಲ್.ಮುರಳಿಕೃಷ್ಣ ಸೇರಿದಂತೆ ಬೋಧಕ, ಬೋಧಕೇತರ ಹಾಗೂ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಸಂಗ್ರಹಿಸಿದ ರಕ್ತವನ್ನು ಮಿಮ್ಸ್‌ಗೆ ಹಸ್ತಾಂತರಿಸಲಾಯಿತು. ಇನ್ನು ಕಳೆದ ವರ್ಷ ನಡೆದ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿಯ ಉತ್ತಮ ಸ್ಪಂದನೆಯಿಂದಾಗಿ 500ಕ್ಕೂ ಹೆಚ್ಚು ಯುನಿಟ್ ರಕ್ತ ಸಂಗ್ರಹವಾಗಿತ್ತು. ಇದು ದಾಖಲೆಯಾಗಿ ಉಳಿದಿದೆ.