ಕೆ.ಎಸ್.ಶಿಲ್ಪಾ ಸಾಧನೆ ದೇಶಕ್ಕೆ ಹೆಮ್ಮೆ: ಜಿಪಂ ಸಿಇಒ ಕೆ.ಆರ್.ನಂದಿನಿ ಮೆಚ್ಚುಗೆ

ಮಂಡ್ಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾಮನ್‌ವೆಲ್ತ್ ಕಂಚಿನ ಪದಕ ವಿಜೇತೆ ಕೆ.ಎಸ್.ಶಿಲ್ಪಾ ಅವರನ್ನು ಅಭಿನಂದಿಸಲಾಯಿತು.
ಮಂಡ್ಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾಮನ್‌ವೆಲ್ತ್ ಕಂಚಿನ ಪದಕ ವಿಜೇತೆ ಕೆ.ಎಸ್.ಶಿಲ್ಪಾ ಅವರನ್ನು ಅಭಿನಂದಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಕಾಮನ್‌ವೆಲ್ತ್ ಕಂಚಿನ ಪದಕ ವಿಜೇತೆಗೆ ಅಭಿನಂದನೆ
  • ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ಸಮಾರಂಭ

ಮಂಡ್ಯ:

ಕಾಮನ್‌ವೆಲ್ತ್ ಕ್ರೀಡಾಕೂಟದ ಶಾಟ್‌ಫುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಪ್ಯಾರಾ ಅಥ್ಲೆಟ್ ಕೆ.ಎಸ್.ಶಿಲ್ಪಾ ಅವರ ಸಾಧನೆ ದೇಶಕ್ಕೆ ಹೆಮ್ಮೆಯ ವಿಷಯ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪ್ಯಾರಾ ಒಲಂಪಿಕ್ಸ್ ಅಸೋಸಿಯನ್ ಆಫ್ ಮಂಡ್ಯ, ಗ್ರಾಮೀಣ ಪುನರ್ವಸತಿ ಯೋಜನೆಯ ಕಾರ್ಯಕರ್ತರ ಸಹಯೋಗದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಕೆ.ಎಸ್.ಶಿಲ್ಪಾ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಬದುಕಿನಲ್ಲಿ ಹಲವಾರು ಜನರಿಗೆ ಸವಾಲು ನಡುವೆಯೂ ಸಾಧನೆ ಮಾಡಬಹುದು ಎನ್ನುವುದಕ್ಕೆ ಶಿಲ್ಪಾ ಸಾಕ್ಷಿಯಾಗಿದ್ದಾರೆ ಎಂದರು.
ಸಾಧನೆ ಮಾಡುತ್ತಿರುವವರಿಗೆ ವಿಶೇಷ ಮೆರಗು ಸಿಗುತ್ತಿದೆ. ಪ್ಯಾರಾ ಒಲಿಂಪಿಕ್‌ನಲ್ಲಿ ಭಾರತದ ಹಲವರು ಸಾಧನೆ ಮಾಡಿದ್ದಾರೆ. ಆ ಸಾಲಿಗೆ ಶಿಲ್ಪಾ ಅವರು ಸೇರುತ್ತಾರೆ. ಅಂಗವೈಕಲ್ಯ ಎನ್ನುವುದು ದೇಹಕಷ್ಟೆಯೇ ಹೊರತು ಮನಸ್ಸಿಗೆ ಅಲ್ಲ. ಸಾಧಿಸುವ ಹಠವಿದ್ದರೆ ಗುರಿ ತಲುಪಬಹುದು. ಇದಕ್ಕೆ ಪೂರಕವಾದ ವಾತಾವರಣ ಹಾಗೂ ಪ್ರೋತ್ಸಾಹ ಸಿಗಬೇಕು ಎಂದು ಹೇಳಿದರು.
ಜಿಪಂ ಉಪ ಕಾರ್ಯದರ್ಶಿ ಡಾ.ಶಿವಲಿಂಗಯ್ಯ, ಮುಖ್ಯ ಯೋಜನಾಧಿಕಾರಿ ಧನುಷ್, ಲೆಕ್ಕಾಧಿಕಾರಿ ಶ್ರೀನಿವಾಸ ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗೀತಾಲಕ್ಷ್ಮೀ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಕೋಮಲ್ಕುಮಾರ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಮನುಜಶ್ರೀ, ಕ್ರೀಡಾ ತರಬೇತುದಾರ ರಾಘವೇಂದ್ರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net