ಸಭೆಯಲ್ಲಿದ್ದ ಹಿಂದೂ ಹಾಗೂ ಮುಸ್ಲಿಂ ಮುಖಂಡರು ಪರಸ್ಪರ ಸೌಹಾರ್ದತೆ ಕಾಪಾಡಿಕೊಂಡು ಸಂಭ್ರಮದಿಂದ ಹಬ್ಬ ಆಚರಿಸುತ್ತೇವೆ ಎಂದು ತಿಳಿಸಿದರು. ಡಿವೈಎಸ್‌ಪಿ ಬಿ.ಚಲುವರಾಜು, ಪಟ್ಟಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಶಿವಕುಮಾರ್, ಗ್ರಾಮಾಂತರ ಸಿಪಿಐ ಹೇಮಂತ್‌ಕುಮಾರ್, ಬಿಂಡಿಗನವಿಲೆ ಪೊಲೀಸ್ ಠಾಣೆಯ ಪಿಎಸ್‌ಐ ಮಾರುತಿ, ನಾಗಮಂಗಲ ಗ್ರಾಮಾಂತರ ಠಾಣೆ ಅಪರಾಧ ವಿಭಾಗದ ಪಿಎಸ್‌ಐ ಲಕ್ಷ್ಮಣ ಕಾಮಣ್ಣವರ್ ಇದ್ದರು.