ಡಿಜಿಟಲ್ ಮಾದರಿಯಲ್ಲಿ ಜನಗಣತಿ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

ಮಂಡ್ಯ ನಗರದಲ್ಲಿ ಆಯೋಜಿಸಿದ್ದ ಜನಗಣತಿ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
ಮಂಡ್ಯ ನಗರದಲ್ಲಿ ಆಯೋಜಿಸಿದ್ದ ಜನಗಣತಿ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ನಗರದಲ್ಲಿ ಪೂರ್ವಭಾವಿ ಸಭೆ
  • ಜನಗಣತಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕಿ ಧನ್ಯಾ ಸೇರಿದಂತೆ ಹಲವರು ಭಾಗಿ
ಮಂಡ್ಯ: ಜಿಲ್ಲೆಯಲ್ಲಿ 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿದೆ. ಆದ್ದರಿಂದ ಈ ಪ್ರಕ್ರಿಯೆಯನ್ನು ದೋಷರಹಿತವಾಗಿ ನಿರ್ವಹಿಸಬೇಕೆಂದು ತಾಂತ್ರಿಕ ಪರಿಣಿತರು ಮತ್ತು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೊದಲ ಹಂತದ ಕಾರ್ಯಾಚರಣೆ ಸಂಬಂಧ ನಿಯೋಜನೆಗೊಂಡಿರುವ ತಾಂತ್ರಿಕ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. 2011ರಲ್ಲಿ ಜನಗಣತಿಯು ಹಳೆಯ ಮ್ಯಾನುವೆಲ್ ಪದ್ಧತಿಯಲ್ಲಿ ನಡೆದಿತ್ತು. ಆದರೆ, 2027ರ ಜನಗಣತಿಯು ಸಂಪೂರ್ಣವಾಗಿ ಮೊಬೈಲ್ ಆ್ಯಪ್ ಮೂಲಕ ನಡೆಯಲಿದೆ. ದತ್ತಾಂಶ ನಿಖರತೆ ಮತ್ತು ಪಾರದರ್ಶಕತೆ ಹೆಚ್ಚಲಿದ್ದು, ಸರ್ಕಾರದ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಸಹಕಾರಿ ಎಂದು ತಿಳಿದರು.
2027ರ ಜನಗಣತಿಯು ಸಂಪೂರ್ಣ ಡಿಜಿಟಲ್ ಆಗಿರುವುದರಿಂದ ಮೊಬೈಲ್ ಆ್ಯಪ್ ಬಳಕೆ, ಡಿಜಿಟಲ್ ದತ್ತಾಂಶ ನಮೂದು ಮತ್ತು ಮನೆ ಪಟ್ಟಿ ನಕ್ಷೆ ತಯಾರು ಮಾಡುವ ಬಗ್ಗೆ ತಾಂತ್ರಿಕ ಸಿಬ್ಬಂದಿ ಹೆಚ್ಚು ಗಮನಹರಿಸಬೇಕು. ಜನಗಣತಿ ನಿರ್ವಹಣೆ ಮತ್ತು ಮೇಲ್ವಿಚಾರಣೆ ವ್ಯವಸ್ಥೆ ಪೋರ್ಟಲ್ ಮೂಲಕ ಲೈವ್ ಮಾನಿಟರಿಂಗ್, ಮನೆ-ಪಟ್ಟಿ ಮತ್ತು ದತ್ತಾಂಶ ನಿರ್ವಹಣೆಯ ವಿಷಯಗಳ ಬಗ್ಗೆ ತಾಂತ್ರಿಕ ಸಿಬ್ಬಂದಿ ತಿಳಿದು ಕೆಲಸ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜನಗಣತಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕಿ ಧನ್ಯಾ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೇಶವಮೂರ್ತಿ, ಜಿಲ್ಲಾಧಿಕಾರಿ ಕಚೇರಿ ಸಹಾಯಕ ನಿರ್ದೇಶಕ ಎಸ್.ಚೇತನ್ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net