ಪಾಂಡವಪುರದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ವಲಯ ಅರಣ್ಯಾಧಿಕಾರಿ ಎಂ.ವಿ.ಅನಿತಾ ಉದ್ಘಾಟಿಸಿದರು. ಬಿ.ಸರೋಜಾ, ಮಮತಾರಾವ್ ಇತರರು ಇದ್ದರು.
ಪಾಂಡವಪುರ: ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ವಲಯ ಅರಣ್ಯಾಧಿಕಾರಿ ಎಂ.ವಿ.ಅನಿತಾ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸ್ಪಂದನಾ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ಕಾವ್ಯಶ್ರೀ ಅವರು ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿ ಅರಿವು ಮೂಡಿಸಿದರು. ವಕೀಲೆ ಎಸ್.ಎಚ್‌ಮೈನಾವತಿ ಅವರು ಮಾತನಾಡಿ, ಮಹಿಳೆಯರ ರಕ್ಷಣೆಗಾಗಿ ಇರುವ ಕಾನೂನು ಮತ್ತು ಬಾಲ್ಯ ವಿವಾಹ ತಡೆಗಟ್ಟುವುದು ಹಾಗೂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳ ತಡೆಗಟ್ಟುವುದು ಕುರಿತಂತೆ ಕಾನೂನು ಮಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಜಿಲ್ಲಾ ನಿರ್ದೇಶಕಿ ಮಮತಾರಾವ್, ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾನವೀನ್, ಜನಜಾಗೃತಿ ವೇದಿಕೆ ಅಧ್ಯಕ್ಷ ಅಶ್ವತ್ಥ್‌ಕುಮಾರೇಗೌಡ, ಸದಸ್ಯ ಶಿವಶಂಕರ್, ತಾಲೂಕು ಯೋಜನಾಧಿಕಾರಿ ಬಿ.ಸರೋಜಾ, ಜ್ಞಾನ ವಿಕಾಶ ಯೋಜನಾಧಿಕಾರಿ ಮೂಕಾಂಬಿಕಾ ಇತರರು ಇದ್ದರು.