ಕೊಪ್ಪ ಸೇರಿದಂತೆ ಸುತ್ತಲ ಗ್ರಾಮಗಳ ಜನರು ಶಿಬಿರದ ಸದುಪಯೋಗ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಕೊಪ್ಪ ಹೋಬಳಿಯ ಆರೋಗ್ಯ ಶ್ರುಶ್ರೂಕಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಅಭಿನಂದಿಸಲಾಯಿತು, ಸಂಜೆ ರಸಸಂಜೆ ಕಾರ್ಯಕ್ರಮ ಜರುಗಿತು. ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಸಿ.ಜೋಗೀಗೌಡ, ಮನ್‌ಮುಲ್ ಮಾಜಿ ನಿರ್ದೇಶಕ ಕುಮಾರ್ ಕೊಪ್ಪ, ತಾಪಂ ಮಾಜಿ ಉಪಾಧ್ಯಕ್ಷ ಬಿ.ಎಂ.ರಘು, ಮಾಜಿ ಸದಸ್ಯ ತೋಯಜಾಕ್ಷ, ಗ್ರಾಪಂ ಮಾಜಿ ಅಧ್ಯಕ್ಷ ವಿಜಯ್‌ಗೌಡ, ವಿಎಸ್‌ಎಸ್‌ಎನ್‌ಬಿ ಅಧ್ಯಕ್ಷ ಶಿವಲಿಂಗಯ್ಯ, ಗ್ರಾಪಂ ಮಾಜಿ ಸದಸ್ಯರಾದ ರಮೇಶ್ ಗೌಡ, ಪರ್ವೀಜ್ ಅಹಮ್ಮದ್, ಗಿರೀಶ್, ನವೀನ್ ಕುಮಾರ್, ಸಂತೋಷ್ ಕೊಟ್ಟಿಗೆಯಾರ್, ಸುರೇಶ್, ರುದ್ರೇಶ್, ಕಿರಂಗೂರು ಅಪ್ಪಾಜಪ್ಪ ಇತರರು ಇದ್ದರು.