ಮದ್ದೂರಲ್ಲಿ ಚಾಮುಂಡೇಶ್ವರಿ ವರ್ಧಂತಿ

ಕುದರಗುಂಡಿ ಗ್ರಾಮದಲ್ಲಿ ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ದೇವಿಗೆ ವಿಶೇಷ ಅಲಂಕಾರ ಮಾಡಿರುವುದು.
ಕುದರಗುಂಡಿ ಗ್ರಾಮದಲ್ಲಿ ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ದೇವಿಗೆ ವಿಶೇಷ ಅಲಂಕಾರ ಮಾಡಿರುವುದು.
Published on

ಮದ್ದೂರು: ತಾಲೂಕಿನ ಕುದರಗುಂಡಿ ಗ್ರಾಮದಲ್ಲಿ ಮಂಗಳವಾರ ಚಾಮುಂಡೇಶ್ವರಿ ವರ್ಧಂತಿಯನ್ನು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಆಚರಿಸಲಾಯಿತು.

ಗ್ರಾಮದಲ್ಲಿ ಚಾಮುಂಡೇಶ್ವರಿ ಹುಟ್ಟುಹಬ್ಬದ ಅಂಗವಾಗಿ ದೇವರಿಗೆ ವಿಶೇಷ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೂರಾರು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.
ಗ್ರಾಮದ ಮುಖಂಡ ಕೆ.ಡಿ.ರಾಜೇಶ್ ಮಾತನಾಡಿ, ಗ್ರಾಮದಲ್ಲಿ ಚಾಮುಂಡೇಶ್ವರಿ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದು, ಚಾಮುಂಡೇಶ್ವರಿ ಸರ್ವರಿಗೂ ಒಳ್ಳೆಯದನ್ನು ಮಾಡಲಿ ಎಂದು ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು ಎಂದರು.
ಮುಖಂಡರಾದ ಜಿ.ಕೆ.ಚಾಮರಾಜು, ಕೆ.ಸಿ.ಚಾಮರಾಜು, ಕೆ.ಪಿ.ರಾಜಶೇಖರಪ್ಪ ಕೆ.ಪಿ.ಶಂಕರ್, ಕೆ.ಎಸ್.ಚಂದ್ರಶೇಖರ್, ಶಿವರಾಮು, ಕೆ.ಎಂ.ಮಧುಕುಮಾರ್, ಧನಂಜಯ ಹಾಗೂ ಕುದರಗುಂಡಿ ಸುತ್ತಮುತ್ತಲ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net