ಹಲಗೂರು:ಚಿರತೆ ಸೆರೆಗೆ ಬೋನ್

 ಚಿರತೆ ಸೆರೆಗೆ ಬೋನ್ ಇಟ್ಟ ಅರಣ್ಯ ಇಲಾಖೆ
ಚಿರತೆ ಸೆರೆಗೆ ಬೋನ್ ಇಟ್ಟ ಅರಣ್ಯ ಇಲಾಖೆ
Published on
ಹಲಗೂರು: ಬೆನಮನಹಳ್ಳಿ ಗ್ರಾಮದ ಹೊರವಲಯದಲ್ಲಿ ಹಲವು ದಿನಗಳಿಂದ ಪದೇ ಪದೇ ಚಿರತೆ ಸುಳಿದಾಡುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನ್ ಇರಿಸಿದ್ದಾರೆ.
ಹಲಗೂರು ಸಮೀಪದ ಬೆನಮನಹಳ್ಳಿ ಗ್ರಾಮದಲ್ಲಿ ಹಲವು ದಿನಗಳಿಂದ ಚಿರತೆ ದಾಳಿ ಮಾಡಿ ಸಾಕು ನಾಯಿಗಳನ್ನು ತಿಂದು ಹಾಕಿತ್ತು. ಈ ಭಾಗದ ರೈತರು ರಾತ್ರಿ ಸಮಯದಲ್ಲಿ ಜಮೀನುಗಳಲ್ಲಿ ನೀರು ಹಾಯಿಸಲು ಭಯ ಪಡುತ್ತಿದ್ದರು. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ಸೋಮವಾರ ಮಧ್ಯಾಹ್ನ ಬಿ.ಕೆ.ನಾಗಣ್ಣ ಅವರ ಜಮೀನಿನಲ್ಲಿ ಬೋನ್ ಇರಿಸಿದ್ದು, ಚಿರತೆ ಸೆರೆಗೆ ಅಗತ್ಯವಿರುವ ಸಿದ್ಧತೆ ಮಾಡಲಾಗಿದೆ ಎಂದು ಮಳವಳ್ಳಿ ಪ್ರಾದೇಶಿಕ ಅರಣ್ಯ ವಲಯದ ಗಸ್ತು ಅರಣ್ಯ ಪಾಲಕ ಪಿ.ಎಂ.ಕೃಷ್ಣ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ರೈತರಾದ ಮನು, ಚೇತನ್, ನಿತಿನ್, ಪಾಪಣ್ಣ, ಅರಣ್ಯ ಇಲಾಖೆ ಸಿಬ್ಬಂದಿ ಪ್ರದೀಪ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net