ಸರ್ಕಾರಿ ಶಾಲೆಯಲ್ಲಿ ಮಕ್ಕಳ ಕಲಿಕೆ ಸುಲಭ

ಕಿಕ್ಕೇರಿಯ ಕೆಪಿಎಸ್ ಪ್ರೌಢಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಉತ್ತಮ ಕಲಿಕೆ-ಉಜ್ವಲ ಭವಿಷ್ಯ ಕಾರ್ಯಕ್ರಮವನ್ನು ಶಿಕ್ಷಣ ಸಂಯೋಜಕ ನವೀನ್‌ಕುಮಾರ್ ಉದ್ಘಾಟಿಸಿದರು. ಚಲುವನಾರಾಯಣಸ್ವಾಮಿ, ಜೆ.ಎಸ್. ಸುರೇಶ್, ಗಿರೀಶ್, ಮಹಮ್ಮದ್ ರಿಜ್ವಿ ಇತರರಿದ್ದರು.

Published on
ಕಿಕ್ಕೇರಿ: ಮಕ್ಕಳ ಕಲಿಕೆಗೆ ಶಿಕ್ಷಣ ಇಲಾಖೆ ವಿಶೇಷವಾಗಿ ಒತ್ತು ನೀಡುತ್ತಿದ್ದು, ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಲು ಪಾಲಕರು ಮುಂದಾಗಬೇಕು ಎಂದು ಶಿಕ್ಷಣ ಸಂಯೋಜಕ ನವೀನ್‌ಕುಮಾರ್ ತಿಳಿಸಿದರು.
ಇಲ್ಲಿನ ಕೆಪಿಎಸ್ ಪ್ರೌಢಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಉತ್ತಮ ಕಲಿಕೆ-ಉಜ್ವಲ ಭವಿಷ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ವರ್ಷದ ಶಿಕ್ಷಣ ಇಲಾಖೆ ಘೋಷವಾಕ್ಯ ಇದಾಗಿದ್ದು, ಮಕ್ಕಳ ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಕರು ಸದಾ ಸಿದ್ಧರಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಈ ಬಾರಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಿದೆ. ತಾಲೂಕಿನಲ್ಲಿ ಪ್ರತಿಷ್ಠಿತ ಸರ್ಕಾರಿ ಪ್ರೌಢಶಾಲೆ ಇದಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಲು ಗುಣಾತ್ಮಕ ಶಿಕ್ಷಣ ಕಾರಣ ಎಂಬುದನ್ನು ಪಾಲಕರು ಮರೆಯಬಾರದು ಎಂದರು.
ಉಪಪ್ರಾಂಶುಪಾಲ ಚಲುವನಾರಾಯಣಸ್ವಾಮಿ ಮಾತನಾಡಿದರು. ಶಿಕ್ಷಣ ಸಂಯೋಜಕ ಜೆ.ಎಸ್. ಸುರೇಶ್, ಸಿಬ್ಬಂದಿ ಗಿರೀಶ್, ಮಹಮ್ಮದ್ ರಿಜ್ವಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net