ಪೇಟೆ ಬೀದಿ ರಸ್ತೆಯ ಕೊಲ್ಲಿ ವೃತ್ತದಿಂದ ಪ್ರವಾಸಿ ಮಂದಿರದ ವೃತ್ತದವರೆಗಿನ ತೆರವು ಕಾರ್ಯಾಚರಣೆಯಲ್ಲಿ ನಗರಸಭೆ, ಲೋಕೋಪಯೋಗಿ ಹಾಗೂ ನಗರದ ಪೋಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನವೀನ್ ನೇತೃತ್ವದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು. ಅಂಗಡಿ-ಮುಂಗಟ್ಟುಗಳ ಸರಕು, ತಗಡಿನ ಶೀಟ್, ನಾಮಫಲಕ ಸೇರಿದಂತೆ ಇತರ ವಸ್ತುಗಳನ್ನು ತೆರವುಗೊಳಿಸಲಾಯಿತು.