ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದ ಬಹಿರಂಗ ಸಭೆಯಲ್ಲಿ ಮಾತನಾಡಿರುವ ಶಾಸಕ ಪ್ರದೀಪ್ ಈಶ್ವರ್, ಹಿರಿಯ ನಾಯಕ ಬಸವರಾಜ ಯತ್ನಾಳ್, ಮಾಜಿ ಸಂಸದ ಪ್ರತಾಪ್‌ಸಿಂಹ ಸೇರಿದಂತೆ ಹಲವರನ್ನು ಕೀಳು ಮಟ್ಟದ ಶಬ್ದಗಳನ್ನು ಬಳಸಿ ಅವಹೇಳನ ಮಾಡಿದ್ದಾರೆ. ಬಿಜೆಪಿಗೆ ಮತ ಹಾಕಬೇಡಿ, ನಿಮ್ಮ ದೇಶಭಕ್ತಿ ಪ್ರಶ್ನಿ ಮಾಡಿದವರು ಬಿಜೆಪಿಯವರು. ನಿಮ್ಮ ಮನೆಯ ಹೆಣ್ಣು ಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿ ಮಾಡಿದವರು ಕಾಂಗ್ರೆಸ್ಸಿಗರು ಎಂದು ಸಾರ್ವಜನಿಕವಾಗಿ ಒಂದು ಸಮಾಜವನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆ. ಇವರ ವಿರುದ್ಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.