ಸುಂಕಾತೊಣ್ಣೂರು ಡೇರಿ ಅಧ್ಯಕ್ಷರಿಗೆ ಅಭಿನಂದನೆ

ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಲೋಕೇಶ್ ಅವರನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಅಭಿನಂಧಿಸಿದರು.
ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಲೋಕೇಶ್ ಅವರನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಅಭಿನಂಧಿಸಿದರು.
Published on
ಪಾಂಡವಪುರ: ತಾಲೂಕಿನ ಸುಂಕಾತೊಣ್ಣೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಲೋಕೇಶ್ ಅವರನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸೋಮವಾರ ಅಭಿನಂದಿಸಿದರು.
ಬಳಿಕ ಮಾತನಾಡಿ, ಸುಂಕಾತೊಣ್ಣೂರು ಡೇರಿಗೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾದ ಲೋಕೇಶ್ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರು ಸಂಘದ ಎಲ್ಲ ನಿರ್ದೇಶಕರು ಜತೆಗೂಡಿ ಸಂಘದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲಿದ್ದಾರೆ. ಜತೆಗೆ ಒಕ್ಕೂಟದಿಂದ ದೊರೆಯುವ ಎಲ್ಲ ಸೌಲಭ್ಯವನ್ನು ರೈತರಿಗೆ ತಲುಪಿಸಲು ಪ್ರಾಮಾಣಿಕವಾಗಿ ಶ್ರಮಿಸಲಿದ್ದಾರೆ ಎಂದರು.
ಈ ವೇಳೆ ಗ್ರಾಮದ ಮುಖಂಡರಾದ ಶಿವಲಿಂಗೇಗೌಡ, ಲಯನ್ ಶಿವಕುಮಾರ್, ಪಾರ್ಥಸಾರಥಿ, ಡೇರಿ ಮಾಜಿ ಅಧ್ಯಕ್ಷ ಎಸ್.ಜಿ.ಮಹೇಶ್, ನಿರ್ದೇಶಕರಾದ ಜೆ.ದೇವೇಗೌಡ, ನವೀನ, ಸತೀಶ, ಲೋಕೇಶ್, ಯಶೋದಮ್ಮ, ರಾಮಚಂದ್ರು, ಕಾಳೇಗೌಡ ಮುಖಂಡರಾದ ಶಾಂತಮೂರ್ತಿ, ರಾಮು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net