ಮದ್ದೂರು ತಾಲೂಕಿನ ಹಾಗಲಹಳ್ಳಿ ಗೇಟ್ ಬಳಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಸುಮಾರು 2.5 ಕೋಟಿ ರೂ. ವೆಚ್ಚದಲ್ಲಿ ಹೆಬ್ಬಾಳ ಚೆನ್ನಯ್ಯ ನಾಲೆಯ 19ನೇ ವಿತರಣಾ ನಾಲೆ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕದಲೂರು ಉದಯ್ ಗುರುವಾರ ಭೂಮಿಪೂಜೆ ನೆರವೇರಿಸಿದರು. ಎ.ಎಸ್.ರಾಜೀವ್, ಎಇಇ ಪ್ರಶಾಂತ್, ಶಿವಕುಮಾರ್, ಕೆಂಪರಾಜು, ಇಂದ್ರಕುಮಾರ್ ಮಹೇಶ್ ಇದ್ದರು.
ಕೆ.ಎಂ.ದೊಡ್ಡಿ: ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆ ಹೆಸರಿನಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಮಾಡಲು ಕ್ಷೇತ್ರ ಪುನರ್ವಿ ಂಗಡಣೆ ಮಾಡುವ ಬಿಲ್ ಪಾಸ್ ಮಾಡಲು ತಂತ್ರ ರೂಪಿಸಿ ಅದಕ್ಕೆ ಸೋಲಾಗಿದ್ದು, ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಶಾಸಕ ಕದಲೂರು ಉದಯ್ ಸ್ಪಷ್ಟಪಡಿಸಿದರು.
ಸಮೀಪದ ಎಚ್.ಹಾಗಲಹಳ್ಳಿ ಗೇಟ್ ಬಳಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಸುಮಾರು 2.5 ಕೋಟಿ ರೂ. ವೆಚ್ಚದಲ್ಲಿ ಹೆಬ್ಬಾಳ ಚೆನ್ನಯ್ಯ ನಾಲೆಯ 19ನೇ ವಿತರಣಾ ನಾಲೆ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತಾನಾಡಿದರು.
ಪ್ರಧಾನಿ ಮೋದಿ ಅವರು ಮೂರನೇ ಎರಡು ಬಹುಮತ ಇಲ್ಲದಿದ್ದರೂ ರಾಜಕೀಯ ಲಾಭಕ್ಕಾಗಿ ಮಹಿಳಾ ಮೀಸಲು ಮತ್ತು ಕ್ಷೇತ್ರ ಪುನರ್ವಿಂಗಡಣೆ ಮಸೂದೆಗಳನ್ನು ಒಟ್ಟಿಗೆ ಜಾರಿಗೆ ತರಲು ಮುಂದಿಟ್ಟು ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಯತ್ನಿಸಿದ್ದ ಕೇಂದ್ರ ಸರ್ಕಾರಕ್ಕೆ ಸೋಲಾಗಿದ್ದು ಮಹಿಳೆ ಮೀಸಲು ತಂದಿದ್ದೇ ಕಾಂಗ್ರೆಸ್ ಪಕ್ಷ ಎಂಬುದನ್ನು ಕೇಂದ್ರ ಸರ್ಕಾರ ಮರೆತಿರುವುದು ಹಾಸ್ಯಾಸ್ಪದ ಎಂದರು.
ಜನಸಂಖ್ಯಾ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿವೆ. ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿ ಕ್ಷೇತ್ರ ಪುನರ್ವಿಂಗಡಣೆಯಿಂದ ಉತ್ತರ ಭಾರತದ ರಾಜ್ಯಗಳಿಗೆ ಅನುಕೂಲವಾಗುತ್ತವೆ. ದಕ್ಷಿಣ ಭಾರತ ರಾಜ್ಯಗಳಿಗೆ ಅನ್ಯಾಯವಾಗುತ್ತದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷವನ್ನು ಸಚಿವ ಜಮೀರ್ ಸೇರಿದಂತೆ ಯಾವ ನಾಯಕರು ತೊರೆಯುವ ಪ್ರಶ್ನೆಯೇ ಇಲ್ಲ. ಮುಂದಿನ ದಿನಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷ ಸಿದ್ಧಾಂತಗಳನ್ನು ಒಪ್ಪಿ ಪಕ್ಷ ಸೇರ್ಪಡೆಗೊಳ್ಳುತ್ತಾರೆ ಎಂದು ತಿಳಿಸಿದರು.
ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಕಾವೇರಿ ನೀರಾವರಿ ನಿಗಮದ ಎಇಇ ಪ್ರಶಾಂತ್, ಎಇ ಶಿವಕುಮಾರ್, ಮುಖಂಡರಾದ ಕೆಂಪರಾಜು, ಇಂದ್ರಕುಮಾರ್ ಮಹೇಶ್, ಬ್ಯಾಂಕ್ ಶಿವಣ್ಣ, ಹೊನ್ನಾಯನಹಳ್ಳಿ ಮಹೇಂದ್ರ, ಪುನೀತ್, ಮಧುಕರ್. ವಿಜಯ್, ಪುಟ್ಟಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮದ್ದೂರು ತಾಲೂಕಿನ ಹಾಗಲಹಳ್ಳಿ ಗೇಟ್ ಬಳಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಸುಮಾರು 2.5 ಕೋಟಿ ರೂ. ವೆಚ್ಚದಲ್ಲಿ ಹೆಬ್ಬಾಳ ಚೆನ್ನಯ್ಯ ನಾಲೆಯ 19ನೇ ವಿತರಣಾ ನಾಲೆ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕದಲೂರು ಉದಯ್ ಗುರುವಾರ ಭೂಮಿಪೂಜೆ ನೆರವೇರಿಸಿದರು. ಎ.ಎಸ್.ರಾಜೀವ್, ಎಇಇ ಪ್ರಶಾಂತ್, ಶಿವಕುಮಾರ್, ಕೆಂಪರಾಜು, ಇಂದ್ರಕುಮಾರ್ ಮಹೇಶ್ ಇದ್ದರು.