ಕಾಂಗ್ರೆಸ್ ಕಾರ್ಯಕರ್ತರಿಂದ ಸಚಿವರಿಗೆ ಅಭಿನಂದನೆ

ಮೇಲುಕೋಟೆ ದೇವಾಲಯಕ್ಕೆ ಆಗಮಿಸಿದ ಸಚಿವ ಎನ್.ಚಲುವರಾಯಸ್ವಾಮಿ ದಂಪತಿಯನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.
ಮೇಲುಕೋಟೆ ದೇವಾಲಯಕ್ಕೆ ಆಗಮಿಸಿದ ಸಚಿವ ಎನ್.ಚಲುವರಾಯಸ್ವಾಮಿ ದಂಪತಿಯನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.
Published on

ಮೇಲುಕೋಟೆ: ಮುಖ್ಯಮಂತ್ರಿ ಡಿಕೆಶಿ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ, ಮೊದಲ ಬಾರಿಗೆ ಮನೆದೇವರ ದರ್ಶನಕ್ಕೆ ಮೇಲುಕೋಟೆಗೆ ಆಗಮಿಸಿದ್ದ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಮೇಲುಕೋಟೆಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಅದ್ದೂರಿಗೆ ಸ್ವಾಗತಿಸಿದರು.

ಮೇಲುಕೋಟೆ ಡೇರಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಕಾಡೇನಹಳ್ಳಿ ರಾಮಚಂದ್ರು ಅವರು ದೇವಾಲಯದ ಅಮ್ಮನವರ ಸನ್ನಿಧಿ ಬಳಿ ಸಚಿವರನ್ನು ಅಭಿನಂದಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ತ್ಯಾಗರಾಜು ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಬೃಹತ್ ಹೂವಿನ ಹಾರಗಳನ್ನು ಸಚಿವರಿಗೆ ಹಾಕಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮೇಲುಕೋಟೆ ಕೃಷಿ ಪತ್ತಿನ ಸಂಘದ ಅಧ್ಯಕ್ಷ ಎಂ.ಬಿ.ಯೋಗನರಸಿಂಹೇಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಗಂಗಾಧರ್, ರಾಂಪುರ ರಮೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net