ಕದಲೂರು ಉದಯ್ ಟ್ರಸ್ಟ್‌ನಿಂದ ನಿರಂತರ ಸೇವೆ

ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಸದಸ್ಯ ಕೆ.ಎಂ.ರವಿ ಧನ ಸಹಾಯ ನೀಡಿದರು. ಮಹೇಂದ್ರ, ಮುತ್ತುರಾಜು, ಶಿವಣ್ಣ, ಸಂತೋಷ್, ಪುನೀತ್, ವಿಜಯ್, ಮನು, ಯೋಗಾನಂದ, ರಾಮಣ್ಣ, ಉಮೇಶ್ ಇತರರು ಇದ್ದರು.
ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಸದಸ್ಯ ಕೆ.ಎಂ.ರವಿ ಧನ ಸಹಾಯ ನೀಡಿದರು. ಮಹೇಂದ್ರ, ಮುತ್ತುರಾಜು, ಶಿವಣ್ಣ, ಸಂತೋಷ್, ಪುನೀತ್, ವಿಜಯ್, ಮನು, ಯೋಗಾನಂದ, ರಾಮಣ್ಣ, ಉಮೇಶ್ ಇತರರು ಇದ್ದರು.
Published on
ಕೆ.ಎಂ.ದೊಡ್ಡಿ: ಮದ್ದೂರು ಕ್ಷೇತ್ರದ ಅಭಿವೃದ್ಧಿ, ಜನತೆಯ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿರುವ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಸಾಕಷ್ಟು ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ನಡೆಯುತ್ತಿದೆ ಎಂದು ಟ್ರಸ್ಟಿ ಹಾಗೂ ಸಮಾಜ ಸೇವಕ ಕದಲೂರು ರವಿ ತಿಳಿಸಿದರು.
ಸಮೀಪದ ಮಠದ ಹೊನ್ನಾಯಕನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ಆಯೋಜಿಸಿದ್ದ ಶ್ರೀ ಮುತ್ತುರಾಯಸ್ವಾಮಿ, ಮಂಟೇಸ್ವಾಮಿ ಮತ್ತು ಶ್ರೀ ಚಾಮುಂಡೇಶ್ವರಿ ದೇವಿ ಮೆರವಣಿಗೆ, ಪಂಕ್ತಿ ಸೇವೆ ಕಾರ್ಯಕ್ರಮದಲ್ಲಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪಂಕ್ತಿ ಸೇವೆಗೆ ಆರ್ಥಿಕ ಧನ ಸಹಾಯ ನೀಡಿ ಮಾತನಾಡಿದರು.
ಕಳೆದ ಐದು ವರ್ಷಗಳಿಂದ ಶಾಸಕ ಕೆ.ಎಂ.ಉದಯ್ ಅವರ ನೇತೃತ್ವದಲ್ಲಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ನಿರಂತರವಾಗಿ ಮದ್ದೂರು ಕ್ಷೇತ್ರದಲ್ಲಿ ಜನಸೇವೆಯಲ್ಲಿ ತೊಡಗಿದ್ದು, ಕ್ಷೇತ್ರದಲ್ಲಿನ ದೇವಾಲಯಗಳ ಜೀರ್ಣೋದ್ಧಾರ, ವಿವಾಹ ಶಾಲೆಗಳ ಅಭಿವೃದ್ಧಿ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ಪೂರ್ವಕವಾಗಿ ಟ್ರಸ್ಟ್‌ನಿಂದ ಆರ್ಥಿಕ ಸಹಾಯ ನೀಡಲಾಗಿದೆ. ಸ್ಥಳೀಯ ಉತ್ಸವಗಳಿಗೆ ಬೆಂಬಲ ನೀಡುವ ಮೂಲಕ ಸಕ್ರಿಯವಾಗಿದೆ ಎಂದರು.
ಮದ್ದೂರು ಕ್ಷೇತ್ರವನ್ನು ಮಾದರಿಯಾಗಿ ರೂಪಿಸಲು ಸರ್ಕಾರದಿಂದ ಎರಡು ಸಾವಿರ ಕೋಟಿ ರೂ.ಗೂ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದರು.
ಟ್ರಸ್ಟ್ ವತಿಯಿಂದ ಸಾಮಾಜಿಕ ಸೇವಾ ಕಾರ್ಯವನ್ನು ನಿರಂತರವಾಗಿ ನಡೆಸುತ್ತಾ ಬಂದಿದ್ದಾರೆ. ತಾಲೂಕಿನ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಪುಸ್ತಕ ವಿತರಣೆ, ಶಾಲಾ ವಿದ್ಯಾರ್ಥಿಗಳ ಪ್ರವೇಶ ಶುಲ್ಕ, ಉನ್ನತ ವಿದ್ಯಾಭ್ಯಾಸಕ್ಕೆ ಧನ ಸಹಾಯ ಮಾಡಿ ಕ್ಷೇತ್ರದ ವಿದ್ಯಾರ್ಥಿಗಳ ಅಭಿವೃದ್ಧಿಗೆ ಶ್ರಮಿಸಲಾಗಿದೆ ಎಂದು ತಿಳಿಸಿದರು.
ಮದ್ದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 50ಕ್ಕೂ ಹೆಚ್ಚಿನ ಶುದ್ಧ ಕುಡಿಯುವ ನೀರಿನ ಘಟಕಗಳು, ಕಡುಬಡವರಿಗೆ ಧನ ಸಹಾಯ ನೀಡುವ ಮೂಲಕ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಆಸರೆಯಾಗಿದ್ದು, ಮದ್ದೂರಿನಲ್ಲಿ ನಡೆದ ಮದ್ದೂರಮ್ಮನ ಜಾತ್ರೆಯನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ. 10 ದಿನಗಳ ಕಾಲ ನಿರಂತರವಾಗಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಿ, ಮದ್ದೂರು ಉತ್ಸವ ಆಯೋಜನೆ ರಾಸುಗಳಿಗೆ ಸೌಕರ್ಯಗಳನ್ನು ಒದಗಿಸಿ, ಉತ್ತಮ ಬಹುಮಾನ ನೀಡಿ ಉತ್ತೇಜಿಸಲಾಗಿದೆ. ಕಬಡ್ಡಿ, ವಾಲಿಬಾಲ್ ಕ್ರೀಡಾಕೂಟಗಳನ್ನು ಆಯೋಜಿಸಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗಿದೆ. ಮದ್ದೂರು ನಗರಸಭೆ ವ್ಯಾಪ್ತಿಯ ಮಹಿಳೆಯಾರಿಗಾಗಿ ರಂಗೋಲಿ ಸ್ಪರ್ಧೆ ಆಯೋಜಿಸಿ ಪ್ರೋತ್ಸಾಯಿಸಲಾಗಿದೆ ಎಂದು ಹರ್ಷ ವ್ಯಕ್ತ ಪಡಿಸಿದರು.
ಟ್ರಸ್ಟ್ ನೊಂದವರ ಸಹಾಯಕ್ಕೆ ನಿರಂತರವಾಗಿ ರುತ್ತದೆ. ಮದ್ದೂರಿನ ಕ್ಷೇತ್ರದ ಜನತೆಗೆ ಒಂದಲ್ಲ ಒಂದು ರೂಪದಲ್ಲಿ ನಿರಂತರವಾಗಿ ಸೇವೆ ಮಾಡುತ್ತಾ ಬಂದಿದ್ದು, ಮುಂದೆಯೂ ಅಭಿವೃದ್ಧಗಾಗಿ ಶ್ರಮಿಸುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಹೇಂದ್ರ, ಮುತ್ತುರಾಜು, ಶಿವಣ್ಣ, ಸಂತೋಷ್, ಪುನೀತ್, ವಿಜಯ್, ಮನು, ಯೋಗಾನಂದ, ರಾಮಣ್ಣ, ಉಮೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net