ಸಾರ್ವಜನಿಕರಿಂದ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯ

ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಪಿ.ಸಂದರ್ಶ, ರಾಘವ, ಮಧುಕುಮಾರ್, ಮಮತಾಶಂಕರೇಗೌಡ, ಮಹದೇವಯ್ಯ ಇದ್ದರು.
ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಪಿ.ಸಂದರ್ಶ, ರಾಘವ, ಮಧುಕುಮಾರ್, ಮಮತಾಶಂಕರೇಗೌಡ, ಮಹದೇವಯ್ಯ ಇದ್ದರು.
Published on

ಮದ್ದೂರು:

ತಾಲೂಕಿನ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಶುಕ್ರವಾರ ಉಪ ಲೋಕಾಯುಕ್ತರು ದಾಳಿ ಮಾಡಿ ಸುಮೋಟೋ ಪ್ರಕರಣಗಳನ್ನು ದಾಖಲು ಮಾಡಿದ್ದಾರೆ. ಆದರೆ, ಸುಮೋಟೋ ಬದಲು ಅವರನ್ನು ಶಿಕ್ಷೆಗೆ ಗುರಿಪಡಿಸಬೇಕಿತ್ತು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ತಾಲೂಕಿನ ಗೊರವನಹಳ್ಳಿ, ಗೆಜ್ಜಲಗೆರೆ ಗ್ರಾಮಗಳಲ್ಲಿ ರಸ್ತೆ ಮತ್ತು ನಾಲಾ ಅಭಿವೃದ್ಧಿ ಕಾಮಗಾರಿಗೆ ಅಂದಾಜು 3.30ಕೋಟಿ ರೂ.ವೆಚ್ಚದಲ್ಲಿ ಶನಿವಾರ ಚಾಲನೆ ನೀಡಿ ಮಾತನಾಡಿದರು.
ಈ ಸಮಸ್ಯೆ ಅಧಿಕಾರಿಗಳಿಂದ ಬಗೆಹರಿಯುವುದಿಲ್ಲ. ಸಾರ್ವಜನಿಕರೇ ತುರ್ತು ಕೆಲಸಗಳಿಗಾಗಿ ಲಂಚದ ಆಮಿಷ ನೀಡುತ್ತಿದ್ದಾರೆ. ಹೀಗಾಗಿ ಲಂಚ ನೀಡದೇ ನ್ಯಾಯಯುತವಾಗಿ ಸಾರ್ವಜನಿಕರು ಕೆಲಸಗಳನ್ನು ಮಾಡಿಸಿಕೊಳ್ಳುವ ಮೂಲಕ ವ್ಯವಸ್ಥೆಗಳನ್ನು ಸರಿಪಡಿಸಲು ಸಾಧ್ಯವಾಗಲಿದೆ ಎಂದರು.
ಉಪ ಲೋಕಾಯುಕ್ತರು ದಾಳಿ ಮಾಡಿ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಸುಮೋಟೋ ಪ್ರಕರಣಗಳನ್ನು ದಾಖಲು ಮಾಡಿದ್ದಾರೆ. ಆದರೆ, ಸುಮೋಟೋ ಬದಲು ಅವರನ್ನು ಶಿಕ್ಷೆಗೆ ಗುರಿಪಡಿಸಬೇಕಿತ್ತು. ಲೋಕಾಯುಕ್ತ ಅಧಿಕಾರಿಗಳು ಕೆಲವು ಕಡೆ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಸೂಳೆಕೆರೆ ಅಭಿವೃದ್ಧಿ ಕಾಮಗಾರಿಯಲ್ಲಿ ಯಾವುದೇ ಕಳಪೆ ಕಾಮಗಾರಿ ನಡೆಯುತ್ತಿಲ್ಲ. ನಾನು ಕೂಡ ಆಗಿಂದ್ದಾಗೆ ಪರಿಶೀಲನೆ ನಡೆಸುತ್ತಿದ್ದೇನೆ. ಏರಿ ನಿರ್ಮಾಣಕ್ಕೆ ಕೆರೆಯ ಮಣ್ಣನ್ನೆ ಬಳಕೆ ಮಾಡಲಾಗಿದೆ. ಮಳೆಗಾಲ ಆಗಮಿಸಿರುವ ಕಾರಣ ಕೆರೆಯ ಮಣ್ಣು ಅಲ್ಲಲ್ಲಿ ಸ್ವಲ್ಪ ಕುಸಿತವಾಗಿದೆ. ಆದರೆ ಇನ್ನು ಕಾಮಗಾರಿ ಪೂರ್ಣಗೊಂಡಿಲ್ಲ. ಕಾಮಗಾರಿ ಅಂತಿಮ ಘಟ್ಟ ತಲುಪಿದ ಬಳಿಕ ಯಾರು ಬೇಕಾದರೂ ಪರಿಶೀಲನೆ ನಡೆಸಬಹುದು ಎಂದು ಹೇಳಿದರು.
ಸಚಿವ ನಾಗೇಂದ್ರ ಅವರು ಪಕ್ಷಕ್ಕೆ ಯಾವುದೇ ರೀತಿಯ ಮುಜುಗರವಾಗಬಾರದು ಎಂಬ ಉದ್ದೇಶದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಯೇ ವಿನಃ ಮೈತ್ರಿ ಪಕ್ಷಗಳ ಹೋರಾಟಕ್ಕೆ ಮಣಿದು ರಾಜೀನಾಮೆ ನೀಡಿಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಹೈಕಮಾಂಡ್ ಕೂಡ ಅವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿಲ್ಲ ಅವರ ಸ್ವ ಇಚ್ಚೆಯಿಂದ ರಾಜೀನಾಮೆ ನೀಡಿದ್ದಾರೆ ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ್, ಗ್ರಾಪಂ ಮಾಜಿ ಅಧ್ಯಕ್ಷ ಹರೀಶ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಶಂಕರೇಗೌಡ, ಮುಖಂಡರಾದ ಮಧುಕುಮಾರ್, ರಾಘವಾ, ಪ್ರದೀಪ್, ಹಿತೇಶ್, ಮಹದೇವಯ್ಯ, ಮರಿದೇವರು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net