ರಾಜ್ಯಸರ್ಕಾರದ ಧೋರಣೆಗೆ ಆಕ್ರೋಶ: ದಸಂಸ ಕಾರ್ಯಕರ್ತರ ಪ್ರತಿಭಟನೆ

ಮಂಡ್ಯ ನಗರದ ಡಿಸಿ ಕಚೇರಿ ಎದುರು  ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಡ್ಯ ನಗರದ ಡಿಸಿ ಕಚೇರಿ ಎದುರು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಒಳ ಮೀಸಲಾತಿಯ ಗೊಂದಲ ಸರಿಪಡಿಸಬೇಕು
  • ಬಾಕಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಈ ಕೂಡಲೇ ಅಂಗೀಕಾರಗೊಂಡಿರುವ ಒಳ ಮೀಸಲಾತಿ 6:6ರಲ್ಲಿ ತುಂಬಬೇಕು
ಮಂಡ್ಯ: ಸಮುದಾಯಗಳ ಮಧ್ಯೆ ಎಸ್ಸಿ, ಎಸ್ಟಿ ಒಳ ಮೀಸಲಾತಿ ಗೊಂದಲ ಸೃಷ್ಟಿಸಿ ದ್ವೇಷದ ವಿಷಬೀಜ ಬಿತ್ತುತ್ತಿರುವ ಹಾಗೂ ಎಸಿಎಸ್ಪಿ, ಟಿಎಸ್ಪಿ ಹಣದಲ್ಲಿ 53 ಸಾವಿರ ಕೋಟಿ ರೂಗಳನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡು 2026ನೇ ಸಾಲಿನ ಬಜೆಟ್‌ನಲ್ಲಿ ವಾಪಸ್ ಕೊಡದೆ ಹಾಗೂ ಎಸ್ಸಿಎಸ್ಪಿ, ಟಿಎಸ್ಪಿ ಉಪಕಾಯ್ದೆ 2013ರ ಕಲಂ ಸಿ ರದ್ದು ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಲಿತ ವಿರೋಧಿ ನೀತಿ ಖಂಡಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಕಾರ್ಯಕರ್ತರು, ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಶೋಷಿತ ಸಮುದಾಯಗಳಿಗೆ ಉದ್ಯೋಗ ನೇಮಕಾತಿಯಲ್ಲಿ ರೂಪಿಸಿರುವ ರೋಸ್ಟರ್ ಬಿಂದು ಅನುಪಾತ 6:6ರಲ್ಲಿ ಎರಡೂ ಸಮುದಾಯಗಳಿಗೆ ಮೋಸವಾಗದಂತೆ ಒಳ ಮೀಸಲಾತಿಯ ಗೊಂದಲ ಸರಿಪಡಿಸಬೇಕು. ಇದರೊಂದಿಗೆ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು. ಬಾಕಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಈ ಕೂಡಲೇ ಅಂಗೀಕಾರಗೊಂಡಿರುವ ಒಳ ಮೀಸಲಾತಿ 6:6ರಲ್ಲಿ ತುಂಬಬೇಕು. ಅಡುಗೆ ಅನಿಲ ಮತ್ತು ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಯಲಾಗದ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಖಂಡನೀಯ ಎಂದರು.
ಪ್ರತಿಭಟನೆಯಲ್ಲಿ ಸಮಿತಿ ರಾಜ್ಯ ಸಂಚಾಲಕ ಅಂದಾನಿ, ಮುಖಂಡರಾದ ಬಿ.ಎಂ.ಸತ್ಯ, ಟಿ.ಡಿ.ಬಸವರಾಜು, ಎಂ.ಶಿವು, ಡಿ.ಕೆ.ಅಂಕಯ್ಯ, ಮೂರ್ತಿ, ಬಿ.ಶ್ರೀನಿವಾಸ, ಮೆಹಬೂಬ್‌ಖಾನ್, ಎಸ್.ಪಿ.ನಾರಾಯಣಸ್ವಾಮಿ, ಮಂಜುನಾಥ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net