ಮಳವಳ್ಳಿ ತಾಲೂಕಿನ ವಿವಿಧೆಡೆ ದಾಸೋಹ ದಿನಾಚರಣೆ

ಮಳವಳ್ಳಿ ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಬಳಿ ಬುಧವಾರ ವಿವಿಧ ವಿವಿಧ ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಿದ್ಧಗಂಗಾ ಮಠದ ಶ್ರೀ ಡಾ.ಶಿವಕುಮಾರ ಸ್ವಾಮೀಜಿ ಅವರ 7ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಲಾಯಿತು. ತೊಟ್ಟಿಮನೆ ಚನ್ನಪ್ಪ, ವೃಷಬೇಂದ್ರಪ್ಪ, ಆರ್.ಚಂದ್ರಶೇಖರ್, ಜಗದೀಶ್, ಮಲ್ಲೇಶ್, ಗಜೇಂದ್ರ, ನಟರಾಜು, ಪರಶಿವಮೂರ್ತಿ ಇದ್ದರು.
ಮಳವಳ್ಳಿ ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಬಳಿ ಬುಧವಾರ ವಿವಿಧ ವಿವಿಧ ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಿದ್ಧಗಂಗಾ ಮಠದ ಶ್ರೀ ಡಾ.ಶಿವಕುಮಾರ ಸ್ವಾಮೀಜಿ ಅವರ 7ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಲಾಯಿತು. ತೊಟ್ಟಿಮನೆ ಚನ್ನಪ್ಪ, ವೃಷಬೇಂದ್ರಪ್ಪ, ಆರ್.ಚಂದ್ರಶೇಖರ್, ಜಗದೀಶ್, ಮಲ್ಲೇಶ್, ಗಜೇಂದ್ರ, ನಟರಾಜು, ಪರಶಿವಮೂರ್ತಿ ಇದ್ದರು.
Published on
ಮಳವಳ್ಳಿ: ಪಟ್ಟಣ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳಲ್ಲಿ ಬುಧವಾರ ಲಿಂಗೈಕ್ಯ ಶ್ರೀ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಏಳನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ದಾಸೋಹ ದಿನವನ್ನು ಆಚರಿಸಲಾಯಿತು.
ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಬಳಿ ವಿವಿಧ ವೀರಶೈವ ಲಿಂಗಾಯತ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನೆರೆದವರಿಗೆ ಅನ್ನ ದಾಸೋಹ ಮಾಡಲಾಯಿತು.

ಬಸವಕೇಂದ್ರ ತಾಲೂಕು ಅಧ್ಯಕ್ಷ ತೊಟ್ಟಿಮನೆ ಚನ್ನಪ್ಪ ಮಾತನಾಡಿ, ಶ್ರೀ ಶಿವಕುಮಾರ ಸ್ವಾಮೀಜಿ ಅವರು ತಮ್ಮ ಜೀವಿತಾವಧಿಯ ಕೊನೆಯ ಉಸಿರಿರುವವರೆಗೂ ದೀನರ ಒಳಿತಿಗಾಗಿ ತ್ರಿವಿಧ ದಾಸೋಹವನ್ನು ಮಾಡುತ್ತಲೇ ಸಮಾಜದ ಜ್ಞಾನ ದಾಸೋಹದ ಸಂದೇಶವನ್ನು ಸಾರಿ ಹೋಗಿದ್ದಾರೆ ಎಂದ ಅವರು, ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ವೃತ್ತಕ್ಕೆ ವಿಶ್ವಗುರು ಬಸವೇಶ್ವರರ ಹೆಸರನ್ನು ನಾಮಕರಣ ಮಾಡಬೇಕೆಂದು ಹಲವು ವರ್ಷಗಳಿಂದ ಪುರಸಭೆ ಮತ್ತು ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದು, ಇಂದಿಗೂ ಕಾರ್ಯಗತವಾಗಿಲ್ಲ. ಕೂಡಲೇ ನಾಮಫಲಕ ಹಾಕಿಸಿ ಅಧಿಕೃತ ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.
ಮನ್‌ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್, ವೀರಶೈವ ಮಹಾಸಭಾ ತಾಲೂಕು ಪ್ರಧಾನ ಕಾರ್ಯದರ್ಶಿ ಮಲ್ಲೇಶ್, ನಿರ್ದೇಶಕರಾದ ತಾಂಡವಮೂರ್ತಿ, ನಟರಾಜು, ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೃಷಬೇಂದ್ರಪ್ಪ, ಪುರಸಭೆ ಮಾಜಿ ಅಧ್ಯಕ್ಷ ದಯಾಶಂಕರ್, ಮಾಜಿ ಸದಸ್ಯ ಜಗದೀಶ, ಮುಖಂಡರಾದ ವಕೀಲ ಆರ್.ಎಂ.ಚಂದ್ರಶೇಖರ್, ಗಜೇಂದ್ರ, ಎಚ್.ಬಿ.ಶಿವಸ್ವಾಮಿ ಸೇರಿದಂತೆ ಇತರರಿದ್ದರು.
ಬೆಳಕವಾಡಿ: ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದ ಶಿವಕುಮಾರಸ್ವಾಮಿ ಪದವಿಪೂರ್ವ ಕಾಲೇಜಿನಲ್ಲಿ ದಾಸೋಹ ದಿನವನ್ನು ಆಚರಿಸುವ ಮೂಲಕ ಶ್ರೀಗಳ ಸ್ಮರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಪ್ರಾಂಶುಪಾಲ ಎಂ.ಮಹೇಶ್, ಗ್ರಾಪಂ ಅಧ್ಯಕ್ಷ ವೆಂಕಟಪ್ಪ ಹಾಗೂ ಕಾಲೇಜಿನ ಭೋಧಕ ವರ್ಗದವರು ಉಪಸ್ಥಿತರಿದ್ದರು.
ಗೌಡಗೆರೆ, ಚಿಕ್ಕಮುಲಗೂಡು, ವೀರರಾಜಿಪುರ, ಹಲಗೂರು, ರಾಗಿಬೊಮ್ಮನಹಳ್ಳಿ, ಹಂಗ್ರಾಪುರ, ನೆಲ್ಲಿಗೆರೆ, ದೊಡ್ಡಬೂಹಳ್ಳಿ, ಕ್ಯಾತನಹಳ್ಳಿ ಸೇರಿದಂತೆ ಹಲವು ಗ್ರಾಮದಗಳಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಸಂಸ್ಮರಣೋತ್ಸವ ಹಾಗೂ ದಾಸೋಹ ದಿನವನ್ನು ಆಚರಣೆ ಮಾಡುವ ಮೂಲಕ ಅನ್ನ ದಾಸೋಹ ನೆರವೇರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net