ಈ ವೇಳೆ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಡಾ.ಕುಮಾರ ಅವುಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಪಡಿಸುವಂತೆ ತಹಸೀಲ್ದಾರ್ ಚೇತನಾ ಯಾದವ್ ಅವರಿಗೆ ನಿರ್ದೇಶನ ನೀಡಿದ ಅವರು, ಇ-ಆಫೀಸ್‌ನಲ್ಲಿ ಬಾಕಿ ಉಳಿದಿರುವ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಆದಾಯ, ಜಾತಿ, ನಿವಾಸ, ವಂಶವೃಕ್ಷ, ಭೂಹಿಡುವಳಿ ಸೇರಿದಂತೆ ಎಲ್ಲ ಪ್ರಮಾಣಪತ್ರಗಳನ್ನು ಸಕಾಲ ಯೋಜನೆಯಡಿ ನಿಗದಿತ ಅವಧಿಯಲ್ಲಿಯೇ ಸಾರ್ವಜನಿಕರಿಗೆ ಒದಗಿಸಬೇಕು. ಸೇವೆಗಳಲ್ಲಿ ಅನಗತ್ಯ ವಿಳಂಬ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.