ಜ.31ವರೆಗೆ ಜಿಲ್ಲಾದ್ಯಂತ ಲಸಿಕಾ ಅಭಿಯಾನ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ದಢಾರ ಮತ್ತು ರುಬೆಲ್ಲಾ ನಿರ್ಮೂಲನೆ
  • ಜ.31ವರೆಗೆ ವಿಶೇಷ ಪಾಕ್ಷಿಕ ಅಭಿಯಾನ
  • ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ
ಮಂಡ್ಯ: ಜಿಲ್ಲೆಯಲ್ಲಿ ದಢಾರ ಮತ್ತು ರುಬೆಲ್ಲಾ ನಿರ್ಮೂಲನೆಗಾಗಿ ವಿಶೇಷ ಪಾಕ್ಷಿಕ ಅಭಿಯಾನವನ್ನು ಜ.31ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪ್ರಗತಿ ಮತ್ತು ದಢಾರ ರುಬೆಲ್ಲಾ ನಿರ್ಮೂಲನೆ ಕಾರ್ಯಕ್ರಮ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ 9 ರಿಂದ 24 ತಿಂಗಳೊಳಗಿನ ಮಕ್ಕಳಿಗೆ ಏಪ್ರಿಲ್ 2025 ರಿಂದ ಡಿ.25ವರೆಗೆ 13,320 ಪೂರ್ಣ ಲಸಿಕೆ ನೀಡುವ ಗುರಿ ಹೊಂದಿದ್ದು, ಈಗಾಗಲೇ ಡಿಸೆಂಬರ್ ಅಂತ್ಯಕ್ಕೆ 14,493 ಲಸಿಕೆಯನ್ನು ನೀಡಲಾಗಿದೆ ಎಂದು ಹೇಳಿದರು.
ಪೂರ್ಣ ಲಸಿಕೆಯಿಂದ ಹೊರಗುಳಿದ ಮಕ್ಕಳ ಪಟ್ಟಿಯನ್ನು ಸಿದ್ಧಪಡಿಸಿ. ಸದರಿ ಮಕ್ಕಳಿಗೆ ದಢಾರ ರುಬೆಲ್ಲ ನಿರ್ಮೂಲನಾ ಲಸಿಕೆ ನೀಡಿ. ಜ್ವರ ಮತ್ತು ದದ್ದುಗಳು ಮಕ್ಕಳಲ್ಲಿ ಕಾಣಿಸಿಕೊಂಡರೆ ಕೂಡಲೇ ಪ್ರಕರಣ ದಾಖಲಿಸಿ. ಮಗುವನ್ನು ಪರೀಕ್ಷೆಗೆ ಒಳಪಡಿಸುವಂತೆ ಅರಿವಿನ ಕಾರ್ಯಕ್ರಮಗಳನ್ನು ರೂಪಿಸಿ. ಜಿಲ್ಲೆಯಲ್ಲಿ 2025 ನೇ ಸಾಲಿನಲ್ಲಿ 198 ಜ್ವರ ಮತ್ತು ದದ್ದು ಪ್ರಕರಣ ದಾಖಲಾಗಿದ್ದು, ಪರೀಕ್ಷೆ ನಡೆಸಿದ ನಂತರ 8 ರುಬೆಲ್ಲಾ ಪ್ರಕರಣಗಳು ದೃಢಪಟ್ಟಿದೆ. ಸದರಿ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ದಢಾರ ರುಬೆಲ್ಲಾ ನಿರ್ಮೂಲನಾ ಲಸಿಕೆಯಿಂದ ಯಾವುದೇ ಮಕ್ಕಳು ಹೋರಗುಳಿಯದಂತೆ ಸೂಕ್ತ ಕ್ರಮ ವಹಿಸಿ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಆರ್‌ಸಿಎಚ್ ಅಧಿಕಾರಿ ಡಾ.ಕೆ.ಪಿ.ಅಶ್ವಥ್, ಡಾ. ಬೆಟ್ಟಸ್ವಾಮಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net